ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನದವರೆಗೂ ಭಾರೀ ಮಳೆಯಾಗಲಿದೆ. ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಗ್ರಾಮಾಂತರ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ ಇದೆ. ಇನ್ನೆರಡು ದಿನ ಮೋಡ ಕವಿದ ವಾತಾವರಣ ಮುಂದುವರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಇದನ್ನೂ ಓದಿ: High Court: ಡಿಸೆಂಬರ್ 30ರೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ
ರಾಜ್ಯದ ದಕ್ಷಿಣ ಒಳನಾಡು, ಪಶ್ಚಿಮ ಘಟ್ಟ, ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲೂ ಮುಂದಿನ ಮೂರು ದಿನ ಮಳೆಯಾಗಲಿದ್ದು, ಬೆಂಗಳೂರು ನಗರದಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ ಎಂದು ಪಬ್ಲಿಕ್ ಟಿವಿಗೆ ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: e Paper – November 18, 2021
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ ಇದೆ. ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಬದಲಾಗಬಹುದು. ಬಂಗಾಳಕೊಲ್ಲಿಯಿಂದ ಕರಾವಳಿ ಕಡೆ ಸಾಗುತ್ತಿರುವ ವಾಯುಭಾರ ಕುಸಿತವಾಗಿದೆ.
ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆ ಮುನ್ಸೂಚನೆ ಇದೆ.
Heavy rains for next four days in the state

























Discussion about this post