ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 2 ದಿನ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮೇಲ್ಮೈ ಸುಳಿಗಾಳಿ ದುರ್ಬಲಗೊಳ್ಳುತ್ತಿದ್ದು, ಇನ್ನೆರಡು ದಿನಗಳಲ್ಲಿ ಮಳೆ ಕಡಿಮೆಯಾಗುವ ನಿರೀಕ್ಷೆ ಇದೆ.
ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಕೆಲವೆಡೆ ಭಾರೀ ಮಳೆ ಸುರಿಯಲಿದೆ. ಹಾಸನ, ಕೊಡಗು, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾತ್ರಿ ಸುರಿದ ಮಳೆ: ತಡರಾತ್ರಿ ಸುರಿದ ಮಳೆಗೆ ಬೆಂಗಳೂರಿನ ಹಲವೆಡೆ ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ. ವಿದ್ಯಾರಣ್ಯಪುರ, ಯಲಹಂಕ ಅಂಡರ್ ಪಾಸ್ ಗಳಲ್ಲಿ ನೀರು ತುಂಬಿದ್ದು, ಬಸ್, ಬೈಕ್, ಕಾರುಗಳು ನೀರಿನಲ್ಲಿ ಸಿಲುಕಿದ ಪರಿಸ್ಥಿತಿ ಎದುರಾಯಿತು.
ಬೆಂಗಳೂರಿನಲ್ಲಿ ಬಿಟ್ಟೂ ಬಿಡದೆ ಸುರಿದ ಮಳೆಗೆ ಸಾಲು ಸಾಲು ಅವಾಂತರ ಸೃಷ್ಟಿಯಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ತರಕಾರಿ, ಅಕ್ಕಿ ಸೇರಿದಂತೆ ದಿನಬಳಕೆಯ ಎಲ್ಲಾ ವಸ್ತುಗಳು ನೀರುಪಾಲಾಗಿದೆ. ಈ ನಡುವೆ ಇನ್ನೂ 2 ದಿನ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
Continued rain in Bengaluru
























Discussion about this post