ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಕಾರು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ ಎಂಬ ಸುದ್ದಿ ಹರಡಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಂಸದರು, ಅಪಘಾತವಾಗಿದ್ದು ನನ್ನ ಕಾರಲ್ಲ ಬೇರೆ ಕಾರು ಎಂದು ತಿಳಿಸಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ನನ್ನ ಕಾರಿನ ಸಮೀಪವೇ ತೆರಳುತ್ತಿದ್ದ ಬೇರೊಂದು ಕಾರು ರಾಮನಗರದ ಮುದಗೆರೆ ಬಳಿ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ಪಲ್ಟಿಯಾಗಿತ್ತು. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ತಕ್ಷಣ ನನ್ನ ಕಾರಿಂದ ಇಳಿದುಬಂದು ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದೇನೆ. ಯಾವುದೇ ರೀತಿಯ ಗಂಭೀರ ಸಮಸ್ಯೆಗಳಾಗಿಲ್ಲ ಎಂದು ಹೇಳಿದರು.
ನನ್ನ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎಂಬ ಸುದ್ದಿ ಹರಡುತ್ತಿದೆ. ಆದರೆ ಅಪಘಾತವಾಗಿದ್ದು ನನ್ನ ಕಾರಲ್ಲ. ಅಪಘಾತದ ಬಗ್ಗೆ ನಾನೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದೆ. ಹಾಗಾಗಿ ನನ್ನ ಕಾರು ಎಂದು ತಪ್ಪಾಗಿ ಭಾವಿಸಲಾಗಿದೆ. ಅಪಘಾತಕ್ಕೀಡಾಗಿದ್ದು, ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ ಉನ್ನಿಕೃಷ್ಣ ಅವರ ಕಾರು. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವಿವರಿಸಿದರು.
MP Pratap Simha

























Discussion about this post