ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರ ವೈರಸ್ ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.
ಇದನ್ನೂ ಓದಿ: e Paper – November 29, 2021
ಪ್ರಮುಖವಾಗಿ ಧಾರವಾಡ, ಬೆಂಗಳೂರು, ಮೈಸೂರು ಕ್ಲಸ್ಟರ್ ಮೇಲೆ ನಿಗಾ ವಹಿಸಬೇಕು ಎಂದು ಸೂಚಿಸಿರುವ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಧಾರವಾಡ, ಬೆಂಗಳೂರು, ಮೈಸೂರು ಮೂರು ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಕೇರಳ, ಮಹಾರಾಷ್ಟ್ರದಿಂದ ಬಂದ ವಿದ್ಯಾರ್ಥಿಗಳಿಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ.
ಇದನ್ನೂ ಓದಿ: ತ್ರಿಪುರಾ ನಗರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ
ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಕೋವಿಡ್ ಟೆಸ್ಟ್. 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್. ಕೇರಳ ಗಡಿ ಭಾಗದವರಿಗೆ ಸ್ಕ್ರೀನಿಂಗ್ ಕಡ್ಡಾಯ ಗೊಳಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ತಿಂಗಳು ಬ್ರೇಕ್ ಹಾಕಲಾಗಿದ್ದು, ಕಾರ್ಯಾಗಾರ, ಸೆಮಿನಾರ್ ಮುಂದೂಡಲು ಸೂಚನೆ ನೀಡಿದೆ. ವಿದ್ಯಾರ್ಥಿಗಳು ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಸೂಚನೆ ಹೊರಡಿಸಲಾಗಿದೆ.
ಇದನ್ನೂ ಓದಿ: ಗಡಿಯಲ್ಲಿ ಮೌಲಸೌಕರ್ಯ ವೃದ್ಧಿಸುತ್ತಿರುವ ಚೀನಾ: ಸೇನಾಧಿಕಾರಿಗಳ ಸಭೆಯಲ್ಲಿ ಭಾರತ ಕಳವಳ
Omikone panic























Discussion about this post