ಬೆಂಗಳೂರು: ಶಾಲಾ-ಕಾಲೇಜಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದ್ದು, ಈ ನಿಟ್ಟಿನಲ್ಲಿ ಮುಂದಿನ ದಿನದಲ್ಲಿ ಬ್ಯಾನ್ ಮಾಡುವುದರ ಬಗ್ಗೆ ಕೂಡ ತೀರ್ಮಾನ ಮಾಡಲಾಗುವುದು ಅಂತ ಸಚಿವ ಆರ್.ಆಶೋಕ್ ಅವರು ತಿಳಿಸಿದ್ದಾರೆ.
ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಕೋವಿಡ್ ಕೇಸ್ ಹೆಚ್ಚಾಗಿರುವ ಈ ತೀರ್ಮಾನ ಮಾಡಲಾಗಿದೆ. ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಇದಲ್ಲದೇ ರಾಜ್ಯದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ಆರ್‌ಟಿಪಿಸಿಆರ್ ಕಡ್ಡಾಯ ಅಂತ ಹೇಳಿದರು. ಕೇಸ್ ಹೆಚ್ಚು ಇರುವ ಕಡೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಅಂತ ಹೇಳಿದರು. ಇನ್ನೂ ಬೂಸ್ಟರ್ ಡೋಸ್ ಅನ್ನು ಫ್ರೆಂಟ್ ಲೈನ್ ವರ್ಕರ್ಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಅನುಮತಿಯನ್ನು ಕೇಳಲಾಗಿದ್ದು, ಈ ಬಗ್ಗೆ ಮುಂದಿನ ವಾರ ಅನುಮತಿ ಬರಬಹುದು, ಬಂದ ಬಳಿಕ ಬೂಸ್ಟರ್ ಲಸಿಕೆ ನೀಡಲಾಗುವುದು ಅಂತ ಹೇಳಿದರು.
Cultural Programme Ban.

























Discussion about this post