ಚಿಕ್ಕಮಗಳೂರು: ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಎರಡು ಡೋಸ್ ಲಸಿಕೆ ಹಾಕಿಸುವುದು ಪೂರ್ಣಗೊಳಿಸಬೇಕಿತ್ತು. ಆದರೆ ಇನ್ನೂ ಮುಗಿಸಿಲ್ಲ. ಬೂಸ್ಟರ್ ಮಾಡಿಸಬೇಕಿತ್ತು. ಈ ನಿಟ್ಟಿನಲ್ಲಿ ತಕ್ಷಣ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಕೋವಿಡ್ ಮೂರನೇ ಅಲೆ ವ್ಯಾಪಿಸದಂತೆ ಸರ್ಕಾರ ಕಟ್ಟುನಿಟ್ಟಿನ ನಿರ್ವಹಣೆ ಮಾಡಿ, ಅದಕ್ಕೆ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿ ಎರಡನೇ ಅಲೆ ಸಂದರ್ಭದಲ್ಲಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳದೆ ಅನೇಕ ಮಂದಿ ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿಷಾದಿಸಿದರು
ಇಬ್ಬರಿಗೆ ಒಮಿಕ್ರಾನ್ ದೃಢವಾಗಿದ್ದು ಇದು ವ್ಯಾಪಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಅಂತರಾಷ್ಟ್ರೀಯ ವಿಮಾನಗಳನ್ನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಸ್ಥಗಿತಗೊಳಿಸಬೇಕು. ವಿಮಾನ ನಿಲ್ದಾಣದಲ್ಲಿ ಸರಿಯಾದ ತಪಾಸಣೆ ನಡೆಸಿ, ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
Discussion about this post