ನವದೆಹಲಿ: ಎಲ್ಪಿಜಿ ಅಡುಗೆ ಸಿಲಿಂಡರ್ ತೂಕ ಕಡಿಮೆಯಾಗುವ ಸಾಧ್ಯತೆಯಿದೆ. ಈಗಿರುವ 14.2 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ಗಳು ಭಾರವಾಗಿರುವುದರಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುತ್ತದೆ.
ಇದನ್ನೂ ಓದಿ: Rachita Ram: ರಚಿತಾ ರಾಮ್ಗೆ ಯೋಗ ಬಂತು ಯೋಗ; ಭಟ್ಟರ ತೆಕ್ಕೆಗೆ ಬಿದ್ದ ರಚ್ಚು
ಮುಖ್ಯವಾಗಿ ಮಹಿಳೆಯರು ಗ್ಯಾಸ್ ಸಿಲಿಂಡರ್ ಅನ್ನು ಒಂದು ಕಡೆಯಿಂದ ಮತ್ತೊಂದು ಕಡೆ ತೆಗೆದುಕೊಂಡು ಹೋಗಲು ತೊಂದರೆಯಾಗುತ್ತದೆ. ಹೀಗಾಗಿ, ಅದಕ್ಕೆ ಪರಿಹಾರವಾಗಿ ಗ್ಯಾಸ್ ಸಿಲಿಂಡರ್ಗಳ ತೂಕವನ್ನೇ ಕಡಿಮೆ ಮಾಡಲು ಕೇಂದ್ರ ಸರ್ಕಾರ ಯೋಚಿಸಿದೆ.
ಇದನ್ನೂ ಓದಿ: ಕರಕುಶಲ ತರಬೇತಿ ಹಾಗೂ ಉದ್ಯೋಗಕ್ಕಾಗಿ ಚಿರಂತನ ಟ್ರಸ್ಟ್ನಿಂದ ವಿಕಲಾಂಗ/ದಿವ್ಯಾಂಗ ವ್ಯಕ್ತಿಗಳ ಅರ್ಜಿ ಆಹ್ವಾನ
14.2 ಕೆಜಿ ತೂಕದ ಅಡುಗೆ ಅನಿಲದ ಸಿಲಿಂಡರ್ಗಳನ್ನು ಸಾಗಾಟ ಮಾಡಲು ಕಷ್ಟವಾಗುತ್ತದೆ. ಇದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಎಲ್ಪಿಜಿ ಸಿಲಿಂಡರ್ಗಳ ತೂಕವನ್ನು ಕಡಿಮೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯಸಭೆ ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಇದನ್ನೂ ಓದಿ: e Paper – December 8, 2021
ಎಲ್ಪಿಜಿ ಸಿಲಿಂಡರ್ಗಳು ಭಾರವಾಗಿರುವುದರಿಂದ ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಲಾಪದಲ್ಲಿ ರಾಜ್ಯಸಭೆ ಸದಸ್ಯರೊಬ್ಬರು ಪ್ರಸ್ತಾಪಿಸಿದಾಗ ಅದಕ್ಕೆ ಉತ್ತರ ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ, ಮಹಿಳೆಯರು ಮತ್ತು ಹೆಣ್ಣುಮಕ್ಕಳು ಸಿಲಿಂಡರ್ನ (LPG) ಹೆಚ್ಚಿನ ತೂಕವನ್ನು ತಾವೇ ಹೊರುವುದು ನಮಗೆ ಇಷ್ಟವಿಲ್ಲ, ಹಾಗಾಗಿ ಅದರ ತೂಕವನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಲಾಗುತ್ತಿದೆ’ ಎಂದು ಹೇಳಿದರು.
ಇದನ್ನೂ ಓದಿ: Meta: ಮಹಿಳೆಯರನ್ನು ರಕ್ಷಿಸಲು ಭಾರತಕ್ಕಾಗಿ ಸುರಕ್ಷತಾ ಯೋಜನೆಗಳನ್ನು ಘೋಷಿಸಿದ ಮೆಟಾ
14.2 ಕೆ.ಜಿ ತೂಕವನ್ನು 5 ಕೆ.ಜಿ.ಗೆ ಇಳಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರವು ಎಲ್ಪಿಜಿ ಸಿಲಿಂಡರ್ನ ತೂಕವನ್ನು ಕಡಿಮೆ ಮಾಡಲು ವಿವಿಧ ಆಯ್ಕೆಗಳನ್ನು ಪರಿಗಣಿಸುತ್ತಿದೆ.
ಇದನ್ನೂ ಓದಿ:ವೈರಲ್ ಆಯ್ತು ವಿಭಿನ್ನ ಶೈಲಿಯ ಕ್ರಿಕೆಟ್ ಅಂಪೈರಿಂಗ್! ವಿಡಿಯೊ ನೋಡಿ
Government’s thinking to lose weight on cylinders of cooking gas
Discussion about this post