ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಸಾಮಾಜಿಕ ನ್ಯಾಯ ಪಾಲನೆ ಮಾಡಿದ್ದೇವೆ. ತಲಾ ಒಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ, ಐದು ಜನ ಹಿಂದುಳಿದ ವರ್ಗದ, ಮಹಿಳಾ ಅಭ್ಯರ್ಥಿ, ಎರಡು ಮಂದಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದರು.
ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನಕ್ಕೆ 73 ಹಾಗೂ 74 ನೇ ತಿದ್ದುಪಡಿ ತಂದು ಮೊದಲ ಬಾರಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದರು. ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿದ್ದ ರಾಮಾ ಜೋಯಿಸ್ ಅವರು ಇದನ್ನು ವಿರೋಧಿಸಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಅವರ ಮನವಿಯನ್ನು ತಿರಸ್ಕರಿದ್ದರಿಂದ ಇಂದು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಸೌಲಭ್ಯ ಉಳಿದಿದೆ. ಐದು ವರ್ಷಗಳಿಗೊಮ್ಮೆ ಸ್ಥಳೀಯ ಸಂಸ್ಥೆಗಳಿಗೆ ಕಡ್ಡಾಯವಾಗಿ ಚುನಾವಣೆ ನಡೆಯುವಂತೆ ಕಾನೂನು ತಂದವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು. ಬಿಜೆಪಿ ಸರ್ಕಾರ ಸೋಲಿನ ಭಯದಿಂದ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಮುಂದೂಡಿದೆ. ರಾಜ್ಯ ಸರ್ಕಾರದ ಕೆಟ್ಟ ನಿರ್ಧಾರದಿಂದಾಗಿ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಲು ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರೇ ಇಲ್ಲವಾಗಿದೆ. ಸರ್ಕಾರ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಅವರು ಗಂಭೀರ ಆರೋಪ ಮಾಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಮಾಹಿತಿ ಹಕ್ಕು, ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ತಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರ. ಈ ನಿಟ್ಟಿನಲ್ಲಿ ಬಿಜೆಪಿಯವರ ಕೊಡುಗೆ ಏನಿದೆ? ಬಿಜೆಪಿ ಆಡಳಿತದಲ್ಲಿ ಬಡ ರೈತ ಇನ್ನಷ್ಟು ಬಡವನಾಗುತ್ತಿದ್ದಾನೆ, ಅದಾನಿ, ಅಂಬಾನಿಯಂತವರ ಆಸ್ತಿ ದುಪ್ಪಟ್ಟಾಗುತ್ತಿದೆ. ಬಡವರ ಉಚಿತವಾಗಿ ಕೊಡುವ ಅಕ್ಕಿ ಪ್ರಮಾಣ ಕಡಿಮೆ ಮಾಡುತ್ತಾರೆ, ರೈತರ ಸಾಲ ಮನ್ನಾ ಮಾಡಲ್ಲ, ಉದ್ಯಮಿಗಳ ಸಾಲ ಮನ್ನಾ ಮಾಡಿ, ಕಾರ್ಪೊರೇಟ್ ತೆರಿಗೆ ಇಳಿಕೆ ಮಾಡ್ತಾರೆ. ಹಾಗಾದರೆ ಈ ಸರ್ಕಾರ ಯಾರ ಪರವಾಗಿದೆ? ಎಂದು ಅವರು ಪ್ರಶ್ನಿಸಿದರು.
ಇದನ್ನೂ ಓದಿ: Photo Gallery: ನಟಿ ರಶ್ಮಿಕಾ ಮಂದಣ್ಣ ಅವರ ಈ ಫೋಟೊಗಳನ್ನು ನೋಡಿದ್ದೀರೇ?
Discussion about this post