ಬೆಂಗಳೂರು: ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ತಡೆಯಲು ಕರ್ನಾಟಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳು ಹಾಗೂ ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡುವಂತೆ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಆಯುಕ್ತರು ಈಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಕಟ್ಟುನಿಟ್ಟಿನ ಪಾಲನೆ ಮಾಡುವಂತೆ ಸೂಚಿಸಿದ್ದಾರೆ.
ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿವಿಧ ಶಾಲೆ ಹಾಗೂ ಕಚೇರಿ ಭೇಟಿ ನೀಡಿದ ಸಂದರ್ಭದಲ್ಲಿ, ಅತಿಯಾದ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಗಮನಿಸಿದ್ದಾರೆ.ಪ್ಲಾಸ್ಟಿಕ್ ಬಳಕೆಯನ್ನು ಶಾಲಾ ಕಾಲೇಜುಗಳಲ್ಲಿ ತಡೆಗಟ್ಟುವ ನಿಟ್ಟಿನಲ್ಲಿ ಅವರ ಸೂಚನೆಯ ಮೇರೆಗೆ ಶಿಕ್ಷಣ ಇಲಾಖೆ ಈ ಆದೇಶ ಪ್ರಕಟಿಸಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದಿಂದಲೂ ಮಹತ್ವದ ನಿರ್ಣಯ
ಇದಕ್ಕೂ ಮುನ್ನ ಕೇಂದ್ರ ಸರ್ಕಾರವೂ ಸಹ ಪ್ಲಾಸ್ಟಿಕ್ ಬಳಕೆ ನಿರ್ಬಂಧಿಸಿ ಆದೇಶ ಪ್ರಕಟಿಸಿತ್ತು. ಜುಲೈ 2022 ರಿಂದ ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ ಸೇರಿದಂತೆ12 ರೀತಿಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಮೊದಲ ಹಂತವಾಗಿ ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ ಮತ್ತು ಬಳಕೆ ನಿಷೇಧಿಸಲಾಗಿದೆ.
ನಿಷೇಧಿಸಲಾದ ಪ್ಲಾಸ್ಟಿಕ್ ಉತ್ಪನ್ನಗಳಿವು
ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬಾಕ್ಸ್, ಸ್ಟ್ರಾ, ಪ್ಲಾಸ್ಟಿಕ್ ಕಪ್, ಪ್ಲಾಸ್ಟಿಕ್ ಸ್ಪೂನ್, ಗ್ಲಾಸ್, ಬೋರ್ಡ್ ಗಳು, ಬೇಕರಿ ತಿನಿಸುಗಳ ಕವರ್, ಆಕಾಶ ಬುಟ್ಟಿ, ಇಯರ್ ಬಡ್ಸ್, ಸಿಗರೆಟ್ ಬಡ್ಸ್, ಬ್ಯಾನರ್ ಹೀಗೆ ಒಟ್ಟು12 ಬಗೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: 15 ಸಾವಿರ ಶಿಕ್ಷಕರ ನೇಮಕಕ್ಕೆ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
(Karnataka Education Department bans Plastic Usage in Schools)
Discussion about this post