ಬೆಂಗಳೂರು: ರಾಜ್ಯದಲ್ಲಿ ಹೊಸ ರೂಪಾಂತರ ತಾಳಿ ಆತಂಕ ಹೆಚ್ಚುತ್ತಿದ್ದು, ಬೆಂಗಳೂರಿನಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜನರನ್ನು ಎಚ್ಚರಿಸಿದ್ದಾರೆ.
ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ಲಾಕ್‌ಡೌನ್ ಮಾತ್ರ ಕಠಿಣ ಕ್ರಮವಲ್ಲ, ಜನ ಜಾಗೃತರಾಗಬೇಕು ,ಮೊದಲ ಅಲೆಯಲ್ಲಿ ದೇಶದಲ್ಲಿ ಲಾಕ್‌ಡೌನ್ ಜಾರಿಯಾಯಿತು. ಈಗ ಸ್ಥಳೀಯವಾಗಿ ಕಂಟೇನ್ಮೆಂಟ್ ವಲಯ ಮಾಡಲಾಗಿದೆ. ಇನ್ನು ಜಿಲ್ಲಾವಾರು ನಿಯಮ ಪಾಲನೆಗೆ ಡಿಸಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದರು.
ಇನ್ನು ದೊಡ್ಡ ಪ್ರಮಾಣದಲ್ಲಿ ಲಸಿಕಾ ಅಭಿಯಾನ ನಡೆಯುತ್ತಿದ್ದು, ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳ ವ್ಯವಸ್ಥೆಯಿದೆ. ಕೋವಿಡ್ ಎದುರಿಸಲು ನಾವು ಸಂಪೂರ್ಣ ಸಜ್ಜಾಗಿದ್ದೇವೆ. ಆರ್ಥಿಕ ಚಟುವಟಿಕೆಗೆ ನಿರ್ಬಂಧ ಹೇರಲು ಆಗುವುದಿಲ್ಲ ಎಂದು ಸ್ಪಷ್ಟಿಪಡಿಸಿದರು.
Lockdown is not the only drastic measure
























Discussion about this post