ಚಿಕ್ಕಮಗಳೂರು: ಮನುಷ್ಯರಿಗಿರುವ ಸಂವಿಧಾನತ್ಮಾಕವಾದ ಮಾನವ ಹಕ್ಕುಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಸರ್ಕಾರಿ ಅಭಿಯೋಜಕ ಜಿ.ಬಿ. ರಾಘವೇಂದ್ರ ರಾಯ್ಕರ್ ಸಲಹೆ ಮಾಡಿದರು.
ನಗರದ ಕುವೆಂಪು ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವರಿಗೆ ಅವರದೇ ಆದ ಬಹಳಷ್ಟು ಹಕ್ಕುಗಳಿವೆ ಅವು ಜಾರಿಗೆ ಬಂದು ಬಹಳಷ್ಟು ವರ್ಷಗಳು ಕಳೆದಿದ್ದರೂ ಇದುವರೆಗೂ ಅವುಗಳ ಬಗ್ಗೆ ಬಹಳಷ್ಟು ಜನರಿಗೆ ಗೊತ್ತೆ ಇಲ್ಲ ಎಂದು ವಿಷಾಧಿಸಿದ ಅವರು, ನಮ್ಮ ಹಕ್ಕುಗಳನ್ನು ನಾವು ತಿಳಿದುಕೊಂಡು ಅದರಂತೆ ನಡೆದರೆ ದರ್ಜನ್ಯ ಮತ್ತು ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.
ಮನುಷ್ಯರಿಗಿರುವ ಮಾನವ ಹಕ್ಕುಗಳನ್ನು ಎಲ್ಲರೂ ಗೌರವಿಸಿದರೆ ಸಮಾಜದಲ್ಲಿ ದೌರ್ಜನ್ಯ, ಶೋಷಣೆ ಕಡಿಮೆಯಾಗುತ್ತದೆ. ಎಲ್ಲಾ ಶಾಲಾ ಕಾಲೇಜುಗಳಲ್ಲೂ ಮಾನವ ಹಕ್ಕುಗಳ ದಿನಾಚರಣೆಯನ್ನು ನಡೆಸಬೇಕು. ಆ ಮೂಲಕ ವಿದ್ಯಾರ್ಥಿಗಳಿಗೆ ಮಾನವ ಹಕ್ಕು ಗಳ ಬಗ್ಗೆ ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಕಾರ್ಯದರ್ಶಿ ಕೆ.ಸಿ.ಶಂಕರ್, ಮಾನವ ಹಕ್ಕುಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಮಾನವ ಹಕ್ಕುಗಳ ದಿನವನ್ನು ಸಂಸ್ಥೆಯಲ್ಲಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಮಾನವರಿಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದ ಅವರು ಕಾರ್ಯಕ್ರಮಕ್ಕೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಪ್ರಾಂಶುಪಾಲ ವಿ.ಎಸ್.ರಾಘವೇಂದ್ರ, ಶಿಕ್ಷಕರಾದ ಪ್ರೀತೇಶ್, ಶೆಮ್ಮಿ, ಅಜಯ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಾಂಜಲಿ ಕಾರ್ಯಕ್ರಮವನ್ನು ನಿರೂಪಿಸಿದರು. ಸುಜನ್ ಸ್ವಾಗತಿಸಿದರು. ತನ್ವಿ ವಂದಿಸಿದರು.
Human rights must be respected by everyone

























Discussion about this post