ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆ ಸದಸ್ಯರು ನಮ್ಮ ಮೇಲೆ ವಿಶ್ವಾಸ ಇಟ್ಟು ಹೆಚ್ಚು ಮತಗಳನ್ನು ನೀಡಿದ್ದಾರೆ. ೩೦೦ ಮತಗಳಿಂದ ಗೆಲ್ಲುತ್ತೇವೆ ಎನ್ನುವ ಬಿಜೆಪಿ ಮಾತನ್ನು ಸುಳ್ಳು ಮಾಡಿದ್ದಾರೆ. ಈ ಮೂಲಕ ನನಗೆ ಗೌರವ ತಂದು ಕೊಟ್ಟಿದ್ದಾರೆ ಎಂದು ಪರಾಜಿತ ಅಭ್ಯರ್ಥಿ ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡ ತಿಳಿಸಿದರು.
ಫಲಿತಾಂಶದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮರು ಮತದಾನಕ್ಕೆ ನಾವು ಒತ್ತಾಯ ಮಾಡಿದ್ದೇವೆ. ಆದರೆ ಬಿಜೆಪಿ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದ ಮತಗಳ ಕೋಟಾ ದಾಟಿರುವ ಹಿನ್ನೆಲೆಯಲ್ಲಿ ಅದಕ್ಕೆ ಅವಕಾಶವಿಲ್ಲ ಎಂದಿದ್ದಾರೆ ಎಂದರು.
ಮತ ಎಣಿಕೆ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷಗಳಿರುವುದು ಹಾಗೂ ನಾಮಿನಿ ಸದಸ್ಯರುಗಳಿಗೆ ಮತದಾನದ ಹಕ್ಕು ನೀಡುವ ವಿಚಾರವನ್ನು ಪ್ರಶ್ನಿಸಿ ನಾವು ನ್ಯಾಯಾಂಗ ಹೋರಾಟವನ್ನು ಮಾಡುತ್ತೇವೆ ಎಂದು ಹೇಳಿದರು.
The election has honoured me

























Discussion about this post