ಚಿಕ್ಕಮಗಳೂರು: ಮಹಾರಾಷ್ಟ್ರದಲ್ಲಿ ಮರಾಠಿಗರು ಕನ್ನಡ ಭಾವುಟಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಿತ್ತಿಪತ್ರ ಸುಟ್ಟು ಪ್ರತಿಭಟನೆ ನಡೆಸಿದರು.
ಶನಿವಾರ ನಗರದ ಹನುಮಂತಪ್ಪ ವೃತ್ತದಲ್ಲಿ ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ನೇತೃತ್ವದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಮರಾಠಿಗರ ವಿರುದ್ದ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತೇಗೂರು ಜಗದೀಶ್ ಮಾತನಾಡಿ, ಬೆಳಗಾವಿಯಲ್ಲಿ ಎಂಇಎಸ್ ಹಾಗೂ ಶಿವಸೇನೆ ಪುಂಡರು ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿಕೃತಗೊಳಿಸುವ ಹೀನಕೃತ್ಯದ ಮೂಲಕ ದೇಶದ್ರೋಹದ ಕೆಲಸ ಮಾಡಿದ್ದಾರೆ. ಜೊತೆಗೆ ಪೊಲೀಸ್ ಮತ್ತು ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿರುವುದು ಖಂಡನಾರ್ಹವಾದುದು. ಇಂತಹ ಕೃತ್ಯ ನಡೆಸಿದ ಎಂಇಎಸ್ ಹಾಗೂ ಶಿವಸೇನೆ ಪುಂಡರನ್ನು ಬಂದಿಸಿ ಗಲ್ಲಿಗೇರಿಸಬೇಕು. ಇವೆರಡು ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದರು.
ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ನಾಗಲತಾ, ಯುವ ಘಟಕದ ಅಧ್ಯಕ್ಷ ಕುಮಾರ್ ಆರ್ ಶೆಟ್ಟಿ, ಇರ್ಷಾದ್ ಅಹಮದ್, ಭರತ್ ಅರಸ್ ಇದ್ದರು.
protests against insult to Kannada emotions

























Discussion about this post