• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

Anticonversion Bill: ಮತಾಂತರ ನಿಷೇಧ ಕಾಯ್ದೆಯ ಕೋಲಾಹಲ: ಸದನದಲ್ಲಿ ಸಿದ್ಧರಾಮಯ್ಯ ಭಾಷಣ

ಮತಾಂತರ ನಿಷೇಧ ಕಾಯ್ದೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಮಾತನಾಡಿದರು.

Shri News Desk by Shri News Desk
Dec 23, 2021, 05:01 pm IST
in ತಾಜಾಸುದ್ದಿ, ರಾಜಕೀಯ
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

Share on FacebookShare on TwitterTelegram

ಬೆಂಗಳೂರು: ನನ್ನ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರೂಪಿಸಲಾಗಿದ್ದ ಮತಾಂತರ ನಿಷೇಧ ಕಾಯ್ದೆಯ ಕರಡನ್ನು ಸಚಿವ ಸಂಪುಟದ ಮುಂದೆ ತರುವಂತೆ ನಾನು ಸಹಿ ಹಾಕಿದ್ದೆ. ಆದರೆ ಬಿಜೆಪಿ ಸರ್ಕಾರ ತರಲು ಉದ್ದೇಶಿಸಿರುವ ಕಾಯ್ದೆಗೂ, ನಾವಿದ್ದಾಗ ರೂಪಿಸಿದ್ದ ಕಾಯ್ದೆಗೂ ಅಜಗಜಾಂತರ ವ್ಯತ್ಯಾಸಗಳಿವೆ.

ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ, ಅವನೇ ಸರ್ವಾಧಿಕಾರಿಯಲ್ಲ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ, ಕರಡು ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಅದಕ್ಕೆ ತಾತ್ವಿಕವಾಗಿ ಒಪ್ಪಿದ್ದೆ ಎಂದಲ್ಲ.

ಮತ್ತೊಂದು ಪ್ರಮುಖ ಅಂಶವೆಂದರೆ ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಹೇಗಾಗುತ್ತದೆ? ಸಂಪುಟದಲ್ಲಿ ಚರ್ಚಿಸಿ ಅಂಗೀಕಾರ ನೀಡಿದ ನಂತರವೇ ಅದು ಸರಕಾರದ ನಿಲುವಾಗುತ್ತದೆ.

ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015ರ ನವೆಂಬರ್ ತಿಂಗಳಿನಲ್ಲಿ. ಇದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನವನ್ನು ನಾವು  ಮಾಡಲಿಲ್ಲ. ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರದಿದ್ದುದೇ ಇದಕ್ಕೆ ಕಾರಣ.

ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡುಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ, ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3ರಲ್ಲಿ ವಿವಾಹ ಎಂಬ ಪದ ಬಳಕೆ ಇರಲಿಲ್ಲ, ಬಿಜೆಪಿ ಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಕಾಯ್ದೆಯ ನಿಯಮ 12 ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಕಾಯ್ದೆಯು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ.

ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ?

ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಅಲ್ಲಿನ ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿದೆ.

ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು ಹಾಗೂ ವಾಕ್ಯಗಳನ್ನೇ ಇಲ್ಲಿಯೂ ಯಥಾವತ್ತಾಗಿ ಬಳಸಲಾಗಿದೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆಯೂ ಯಾವುದೊ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು?

ಬಲವಂತವಾಗಿ, ಆಸೆ ಆಮಿಷ ಒಡ್ಡಿ, ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ಇದನ್ನು ವಿರೋಧಿಸುತ್ತಿದ್ದೇವೆ.

ದೇಶದಲ್ಲಿ ಶತಮಾನಗಳ ಹಿಂದಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ, ರನ್ನರು ಜೈನ ಧರ್ಮಕ್ಕೆ ಮತಾಂತರ ಗೊಂಡರು. ಸಾಮ್ರಾಟ್ ಆಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಲಿಲ್ಲವೇ? ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವೇನಲ್ಲ.

ಕಾಯಕಯೋಗಿ ಬಸವೇಶ್ವರರು ಬ್ರಾಹ್ಮಣರಾಗಿ ಹುಟ್ಟಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲವೇ? ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಲಕ್ಷಾಂತರ ಜನರ ಜೊತೆಗೆ ಬೌದ್ಧ ಧರ್ಮಕ್ಕೆ ಮತಾಂತರ ಆಗಿಲ್ಲವೇ? ಇವರ‌್ಯಾರು ಅಧಿಕಾರವೋ ಅಥವಾ ಇನ್ಯಾವುದೋ ಕಾರಣಕ್ಕೆ ಮತಾಂತರಗೊಂಡವರಲ್ಲ.

ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ.  2001 ಮತ್ತು 2011 ರ ಜನಗಣತಿಯನ್ನು ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ.

2001 ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ 83.86% ಹಿಂದೂಗಳ ಪ್ರಮಾಣ 2011 ಕ್ಕೆ ಶೇ. 84 ಕ್ಕೆ ಏರಿಕೆಯಾಗಿದೆ, ಮುಸ್ಲಿಮರ ಪ್ರಮಾಣ 12.23% ಇಂದ 12.92 ಆಗಿದೆ, ಕ್ರೈಸ್ತರ ಪ್ರಮಾಣ 1.91% ಇಂದ 1.87% ಗೆ ಇಳಿಕೆಯಾಗಿದೆ. ಇದು ನಮ್ಮ ರಾಜ್ಯದ ವಾಸ್ತವ ಸ್ಥಿತಿ.

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಸಂವಿಧಾನದ ಮೂಲ ನಿಯಮ. ಆದರೆ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯಲ್ಲಿ ಮಹಿಳೆಯರು, ಅಪ್ರಾಪ್ತರು, ಬುದ್ಧಿಭ್ರಮಣೆಯಾದವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡಿದರೆ ಮಾತ್ರ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಈ ಅಸಮಾನತೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ.

ಹಿಂದೂ ಧರ್ಮದ ಜಾತೀಯತೆ, ಅಸ್ಪೃಶ್ಯತೆ, ಅಸಮಾನತೆಗಳನ್ನು ಸರಿಪಡಿಸಲು ಸತತವಾಗಿ ಪ್ರಯತ್ನ ಮಾಡಿದ ಬಾಬಾ ಸಾಹೇಬರು ಕೊನೆಗೆ ಅದು ಸಾಧ್ಯವಾಗದಿದ್ದಾಗ “ನಾನು ಹಿಂದೂವಾಗಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ಸಾಯಲಾರೆ” ಎಂದು ಹೇಳಿ ಬೌದ್ಧ ಧರ್ಮಕ್ಕೆ ಮತಾಂತರ ಗೊಂಡರು. ಜೊತೆಗೆ ಲಕ್ಷಾಂತರ ಜನರಿಗೆ ಸ್ವಇಚ್ಛೆಯಿಂದ ಮತಾಂತರಗೊಳ್ಳಲು ಕರೆನೀಡಿದರು.

ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ.

ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇದು ನಾವು ಮಾಡಲೇಬೇಕಾಗಿರುವ ಕೆಲಸವಾಗಿದೆ.

ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ, ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯ ಮಾಡುತ್ತೇನೆ.

Ex-CM siddharamaiah speaks about agains anti-conversion bill in assembly

ಇದನ್ನೂ ಓದಿ: Political retirement: ಭ್ರಷ್ಟಾಚಾರ ಆರೋಪ ಸಾಬೀತುಪಡಿಸಿದ್ದಲ್ಲಿ ರಾಜಕೀಯ ನಿವೃತ್ತಿ

ಇದನ್ನೂ ಓದಿ:  ರಾಜಕೀಯ ಧೃವೀಕರಣ ಕಾಂಗ್ರೆಸ್ ಮುಖಂಡರ ಹೇಳಿಕೆ ಹಾಸ್ಯಾಸ್ಪದ

Tags: Anticonversion BillSiddharamaiahTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In