• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಅನುಷ್ಠಾನ

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Shri News Desk by Shri News Desk
Dec 26, 2021, 03:31 pm IST
in ರಾಜ್ಯ
Share on FacebookShare on TwitterTelegram

ಮಂಗಳೂರು: ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ (ಮತಾಂತರ ನಿಷೇಧ ಕಾಯ್ದೆ) ಜಾರಿಗೆ ಮೇಲ್ಮನೆಯಲ್ಲಿ ಬಹುಮತ ದೊರೆಯದ ಕಾರಣ, ಸಚಿವ ಸಂಪುಟದಲ್ಲಿ ಈ ಕುರಿತು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಾಯ್ದೆ ಅನುಷ್ಠಾನಗೊಳಿಸುತ್ತೇವೆ ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು, “ಕೆಳಮನೆಯಲ್ಲಿ ಕಾಯ್ದೆಗೆ ಬಹುಮತ ದೊರೆತಿದ್ದು, ಅದನ್ನು ಮಂಡಿಸಲಾಗಿದೆ. ಮೇಲ್ಮನೆಯಲ್ಲಿ ಬಹುಮತ ದೊರೆಯದ ಕಾರಣ ಪ್ರಜಾಪ್ರಭುತ್ವದಲ್ಲಿ ಬಹುಮತ ಪಡೆದು, ಜನವರಿ ವೇಳೆಗೆ ಮೇಲ್ಮನೆಯಲ್ಲಿ ಕಾಯ್ದೆ ಮಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಎಲ್ಲಾ ಧರ್ಮ, ಜಾತಿ, ಪಕ್ಷದವರಿಗೂ ಅನ್ವಯಿಸುತ್ತದೆ. ಹಾಗಾಗಿ ಅದನ್ನು ಪ್ರತಿಯೊಬ್ಬರೂ ಹೆಮ್ಮೆಯಿಂದ ಸ್ವಾಗತಿಸಬೇಕು. ವಿರೋಧಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕಾಯ್ದೆಯನ್ನು ವಿರೋಧಿಸುವವರು ರಾಜಕೀಯ ಕಾರಣಗಳಿಗಾಗಿ ಮಾತ್ರ ವಿರೋಧಿಸುತ್ತಾರೆ. ಆದರೆ ಮಾನಸಿಕವಾಗಿ ಅವರಿಗೂ ಈ ಕಾಯ್ದೆಗೆ ಒಪ್ಪಿಗೆ ಇದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ವಿವಾದಿತ ಮತಾಂತರ ನಿಷೇಧ ಮಸೂದೆಯನ್ನು ಕೊನೆಗೂ ವಿಧಾನ ಪರಿಷತ್‌ನಲ್ಲಿ ಮಂಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅದು ವಿಧಾನ ಸಭೆಯಲ್ಲಿ ಅಂಗೀಕಾರವಾಗಿದ್ದರೂ ಪರಿಷತ್‌ನಲ್ಲಿ ಮಂಡನೆಯಾಗದ ಕಾರಣ ಕಾಯ್ದೆಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. 6 ತಿಂಗಳ ಒಳಗಾಗಿ ಪರಿಷತ್‌ನಲ್ಲಿ ಮಂಡನೆಯಾಗಿ, ಬಹುಮತದಿಂದ ಅಂಗೀಕಾರಗೊಂಡು, ರಾಜ್ಯಪಾಲರ ಸಹಿಯ ನಂತರವಷ್ಟೇ ಕಾಯ್ದೆಯಾಗಲು ಸಾಧ್ಯ. ಹೀಗಿರುವಾಗ ಸರ್ಕಾರ ಸರ್ಕಾರದ ಮುಂದಿನ ನಡೆಯೇನು ಎಂಬ ಪ್ರಶ್ನೆ ಎದ್ದಿದೆ.

ಸರ್ಕಾರವು ಅದನ್ನು ಪರಿಷತ್‌ನಲ್ಲಿ ಮಂಡಿಸದಿರಲು ಮುಖ್ಯ ಕಾರಣ ಬಹುಮತದ ಕೊರತೆ. ಅಲ್ಲದೆ ಪಕ್ಷದಲ್ಲಿನ ಕೆಲವರ ವಿರೋಧ ಸಹ ಸರ್ಕಾರಕ್ಕೆ ತಲೆನೋವಾಗಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ ಸದಸ್ಯರನ್ನು ನೆಚ್ಚಿಕೊಂಡು ಮಸೂದೆ ಮಂಡಿಸಿದರೆ ಸೋಲಾಗಬಹುದೆಂಬ ಕಾರಣಕ್ಕೆ ಮಂಡನೆ ಮಾಡಿಲ್ಲ. ಬದಲಿಗೆ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿ ಅಧಿವೇಶನ ಅಂತ್ಯಗೊಳಿಸಲಾಗಿದೆ.

ಸದನದ ಕೊನೆ ದಿನ ಉಪಸಭಾಪತಿ ಪ್ರಾಣೇಶ್‌ ಮತ್ತು ಬಿಜೆಪಿ ಸದಸ್ಯರಾದ ರುದ್ರೇಗೌಡರವರು ಬೆಳಗಾವಿಯಿಂದ ಹೊರಟು ದಾವಣಗೆರೆ ತಲುಪಿದ್ದರು. ಅವರು ತುರ್ತಾಗಿ ವಾಪಸ್ ಬೆಳಗಾವಿಯ ಸುವರ್ಣ ಸೌಧಕ್ಕೆ ಬರುವಂತೆ ಸೂಚಿಸಲಾಗಿತ್ತು. ಅವರು ಬರುವಿಕೆಗಾಗಿ ಆಡಳಿತ ಪಕ್ಷ ಕಾಯುತ್ತಿತ್ತು. ಅದೇ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಅಧಿವೇಶನ ಆರಂಭಿಸುವಂತೆ ಸಭಾಪತಿ ಕೊಠಡಿಗೆ ತೆರಳಿ ಒತ್ತಾಯಿಸುತ್ತಿದ್ದರು. ಆದರೆ ಸಮಯ ಮೀರುತ್ತಿತ್ತು. ಇನ್ನೊಂದೆಡೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್‌ರವರು ಬಹಿರಂಗವಾಗಿಯೇ ಮತಾಂತರ ನಿಷೇಧ ಮಸೂದೆಯನ್ನು ವಿರೋಧಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಬಹುಮತವಿಲ್ಲದಿದ್ದಾಗ ಮಸೂದೆ ಮಂಡಿಸಿ ಅದಕ್ಕೆ ಸೋಲಾಗುವುದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಹಿಂತೆಗೆದುಕೊಂಡಿದೆ.

ಸುಗ್ರೀವಾಜ್ಞೆ ಮೂಲಕ ಜಾರಿ..?
ಮತಾಂತರ ನಿಷೇಧ ಮಸೂದೆಯ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಮತ್ತು ನೂರಾರು ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಆದರೆ ಸರ್ಕಾರ ಏನಾದರೂ ಮಾಡಿ ಅದನ್ನು ಜಾರಿಗೊಳಿಸಿಯೇ ಸಿದ್ದ ಎಂದು ಹಠ ಹಿಡಿದಿದೆ. ಮುಂದಿನ ಅಧಿವೇಶನ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಅಲ್ಲಿಯವರೆಗೂ ಕಾಯದ ಸರ್ಕಾರ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯಪಾಲರ ಒಪ್ಪಿಗೆ ಪಡೆದಲ್ಲಿ ಕಾಯ್ದೆಯ ಅಂಶಗಳನ್ನು ಹೀಗಿನಿಂದಲೇ ಜಾರಿಗೊಳಿಸಬಹುದು ಎಂಬ ಚರ್ಚೆಗಳಾಗಿವೆ. ಸಚಿವ ಪೂಜಾರಿಯವರ ಹೇಳಿಕೆ ಈ ಚರ್ಚೆಯ ಹಿನ್ನೆಲೆಯಲ್ಲಿ ಹೊರಬಿದ್ದಿದೆ. ಆದರೆ 6 ತಿಂಗಳೊಳಗೆ ಸದನದಲ್ಲಿ ಮಂಡಿಸಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ.

ಮುಂದಿನ ಅಧಿವೇಶನದಲ್ಲಿ ಮಂಡನೆ
ಮುಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಮಂಡಿಸಿ ಹೇಗಾದರೂ ಬಹುಮತವನ್ನು ಒಟ್ಟುಗೂಡಿಸಿ ಮಸೂದೆಯನ್ನು ಪಾಸ್ ಮಾಡುವುದು ಸರ್ಕಾರದ ಎರಡನೇ ಆಯ್ಕೆಯಾಗಿದೆ. ಸದ್ಯ ಬಿಜೆಪಿಗೆ ವಿಧಾನ ಪರಿಷತ್‌ನಲ್ಲಿ ಬಹುಮತಕ್ಕೆ ಸದ್ಯ ಒಬ್ಬ ಸದಸ್ಯರ ಕೊರತೆಯಿದೆ. ಇತ್ತೀಚೆಗೆ ನಡೆದ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿತಯಾಗಿ ಜಯ ಗಳಿಸಿದ್ದಾರೆ. ಅವರನ್ನು ಬಿಜೆಪಿ ತನ್ನೆಡೆಗೆ ಸೆಳೆದುಕೊಳ್ಳುವ ಕಸರತ್ತು ಮಾಡಬಹುದು. ಇಲ್ಲವೇ ಕೆಲ ಜೆಡಿಎಸ್ ಸದಸ್ಯರನ್ನು ಮನವೊಲಿಸುವ ಕೆಲಸ ಮಾಡಬಹುದು.

ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ
ಸದ್ಯಕ್ಕೆ ವಿಧಾನಪರಿಷತ್‌ನಲ್ಲಿ ಮಸೂದೆ ಜಾರಿಯಾಗದಂತೆ ತಡೆಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. ಅದು ಸಹ ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತ ಸಿಗದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಲಿದೆ. ಪಕ್ಷೇತರ ಶಾಸಕರನ್ನು ತನ್ನೆಡೆಗೆ ಸೆಳೆದುಕೊಳ್ಳುವುದು, ಜೆಡಿಎಸ್ ಮೇಲೆ ಒತ್ತಡ ತರುವುದು ಸೇರಿ ಹಲವು ಮಾರ್ಗಗಳನ್ನು ಅನುಸರಿಸಬಹುದಾಗಿದೆ.
ಜನಾಭಿಪ್ರಾಯ ಈ ಮಸೂದೆಯನ್ನು ನೂರಾರು ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಅವು ಮತ್ತಷ್ಟು ಜನಾಭಿಪ್ರಾಯ ರೂಪಿಸುವ ಮೂಲಕ ಮಸೂದೆ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ತರುವ ಸಾಧ್ಯತೆಯು ಇದೆ.

Implementation of Prohibition of Conversion Act by Ordinance

Tags: Implementation of Prohibition of Conversion Act by OrdinanceTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In