• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ದೇಶ ಉಳಿಸಲು ಕಾಂಗ್ರೆಸ್ ಉಳಿಸಬೇಕಿದೆ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರದಲ್ಲಿ ಕೆಪಿಸಿಸಿ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

Shri News Desk by Shri News Desk
Dec 29, 2021, 04:32 pm IST
in ರಾಜಕೀಯ
Siddaramaiah Said: Save Congress to Save Country

ಸಿದ್ದರಾಮಯ್ಯ

Share on FacebookShare on TwitterTelegram

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪನೆಯಾಗಿ ಇಂದಿಗೆ 136 ವರ್ಷಗಳು ತುಂಬಿದೆ. ಭಾರತೀಯರ ಕಷ್ಟ ಸುಖಗಳನ್ನು ಆಲಿಸಲು, ಹಕ್ಕುಗಳ ರಕ್ಷಣೆಗಾಗಿ ಸ್ಥಾಪನೆಯಾದ ಕಾಂಗ್ರೆಸ್ ಪಕ್ಷ ನಂತರ ದೇಶದ ಸ್ವಾತಂತ್ರ್ಯ ಹೋರಾಟದ ಮುಂದಾಳತ್ವ ವಹಿಸಿಕೊಂಡಿತು.

1915ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಗೋಪಾಲ ಕೃಷ್ಣ ಗೋಖಲೆ ಅವರ ಆಹ್ವಾನದ ಮೇರೆಗೆ ಭಾರತಕ್ಕೆ ಬಂದ ಮಹಾತ್ಮ ಗಾಂಧಿ ಅವರು ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣ ತೊಡಗಿಸಿಕೊಂಡರು. ಆ ನಂತರ ಸ್ವಾತಂತ್ರ್ಯ ಚಳವಳಿ ತೀವ್ರತೆಯನ್ನು ಪಡೆದುಕೊಂಡಿತು.

ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ನಡೆಸಿದ ಹೋರಾಟ ಮತ್ತು ಸ್ವಾತಂತ್ರ್ಯ ನಂತರ ದೇಶ ನಿರ್ಮಾಣದತ್ತ ನಡೆಸಿದ ಹೋರಾಟ ಹೀಗೆ ಎರಡು ರೀತಿಯ ಇತಿಹಾಸ ಹೊಂದಿದೆ. ಕಾಂಗ್ರೆಸ್ ಇತಿಹಾಸವೇ ದೇಶದ ಇತಿಹಾಸವೂ ಆಗಿದೆ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಿಜೆಪಿಯವರ ಕೊಡುಗೆ ಶೂನ್ಯ. ನರೇಂದ್ರ ಮೋದಿ ಅವರು ಅರವತ್ತು ವರ್ಷ ದೇಶವನ್ನಾಳಿದ ಕಾಂಗ್ರೆಸ್ ನ ಕೊಡುಗೆ ಏನು ಎಂದು ನಮ್ಮನ್ನೇ ಪ್ರಶ್ನೆ ಮಾಡುತ್ತಾರೆ. ಬಹುಶಃ ಅವರಿಗೆ ದೇಶದ ಇತಿಹಾಸ ಜ್ಞಾನದ ಕೊರತೆಯಿರಬಹುದು. ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು ಎಂದು ನಾನೀಗ ಅವರನ್ನೇ ಪ್ರಶ್ನೆ ಮಾಡುತ್ತೇನೆ. ಉತ್ತರ ಕೊಡಲಿ.

ದೇಶದ ಜನರಿಗೆ ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಾಗೂ ಸಾಮಾಜಿಕ ಸ್ವಾತಂತ್ರ್ಯ ನೀಡಿರುವುದು ಕಾಂಗ್ರೆಸ್ ಪಕ್ಷ. ಹೀಗಾಗಿ ಕಾಂಗ್ರೆಸ್ ಪಕ್ಷದ ಸದಸ್ಯನಾಗಿರುವುದೇ ಒಂದು ಹೆಮ್ಮೆಯ ವಿಷಯ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಮಾಹಿತಿ ಹಕ್ಕು, ಉದ್ಯೋಗ ಖಾತ್ರಿ, ಶಿಕ್ಷಣದ ಹಕ್ಕು, ಆಹಾರ ಭದ್ರತೆ ಕಾನೂನುಗಳನ್ನು ಜಾರಿಗೊಳಿಸಿ, ದೇಶದ ಆರ್ಥಿಕತೆಯನ್ನು ಸದೃಢ ಗೊಳಿಸಿದ್ದರು. ನರೇಂದ್ರ ಮೋದಿ ಅವರು ದೇಶದ ಬೆನ್ನೆಲುಬಾದ ಕೃಷಿಯನ್ನೇ ನಾಶ ಮಾಡಲು ಮೂರು ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿ, ಕೆಲವು ದಿನಗಳ ಹಿಂದೆ ರೈತರ ಹೋರಾಟಕ್ಕೆ ಹೆದರಿ ಮತ್ತು ಚುನಾವಣೆಯಲ್ಲಿ ಸೋತ ಕಾರಣಕ್ಕೆ ವಾಪಾಸು ಪಡೆದಿದ್ದಾರೆ.

ಬ್ರಿಟಿಷ್ ಆಳ್ವಿಕೆಯಲ್ಲಿ ಭಾರತೀಯರು ರಾಷ್ಟ್ರ ಧ್ವಜವನ್ನು ಹಾರಿಸಬಾರದು ಎಂದು ಕಾನೂನು ತಂದರು, ಇದರ ವಿರುದ್ಧ ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರದಲ್ಲಿ ಧ್ವಜಾರೋಹಣ ಮಾಡುವ ಮೂಲಕ ದೊಡ್ಡ ಚಳವಳಿಯನ್ನೇ ಆರಂಭಿಸಲಾಯಿತು. ಲಕ್ಷಾಂತರ ಜನ ಬ್ರಿಟಿಷರ ಗುಂಡಿಗೆ, ಲಾಠಿ ಏಟಿಗೆ ಎದೆ ಕೊಟ್ಟು ನಿಂತು ತ್ಯಾಗ ಬಲಿದಾನಗೈದಿದ್ದರಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ.

ಇವತ್ತು ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದರೆ ಅದಕ್ಕೆ ಸಂವಿಧಾನ ಮತ್ತು ನಮ್ಮ ನಾಯಕರು ನಡೆಸಿದ ಸ್ವಾತಂತ್ರ್ಯ ಹೋರಾಟ ಕಾರಣ. 1925 ರಲ್ಲೇ ಆರ.ಎಸ್.ಎಸ್ ಸ್ಥಾಪನೆಯಾದರೂ ಅವರ‌್ಯಾರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಯಾವೊಬ್ಬ ಆರ್.ಎಸ್.ಎಸ್ ನಾಯಕ ಸ್ವಾತಂತ್ರ್ಯಕ್ಕಾಗಿ ಹುತಾತ್ಮನಾಗಿಲ್ಲ. ಇಂಥವರು ನಮಗೆ ಸ್ವಾತಂತ್ರ್ಯ ಹೋರಾಟ, ದೇಶಪ್ರೇಮದ ಪಾಠ ಮಾಡಲು ಬರುತ್ತಾರೆ.

ನಾವೀಗ ಎಂದಿಗಿಂತ ಹೆಚ್ಚು ಹುರುಪಿನೊಂದಿಗೆ ಜನರ ಬಳಿ ಹೋಗಿ ಕಾಂಗ್ರೆಸ್ ಅನ್ನು ಬೆಂಬಲಿಸುವಂತೆ ಕೇಳಬೇಕು. ಹಿಂದಿನ ನಮ್ಮ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ವರ್ಗದ ಜನರ ಅಭಿವೃದ್ಧಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಕಾನೂನು ಜಾರಿಗೆ ತಂದು, ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಹಂಚಿಕೆಯಾಗುವಂತೆ ಮಾಡಿದೆವು, ಸರ್ಕಾರಿ ಟೆಂಡರ್ ಗಳಲ್ಲಿ ಈ ಸಮುದಾಯಗಳಿಗೆ ಮೀಸಲಾತಿ ನೀಡಿ ಅವರ ಆರ್ಥಿಕ ಏಳಿಗೆಗೆ ಸಹಕಾರಿಯಾಗಿದ್ದೆವು. ಈಗಿನ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾಯ್ದೆ ಮುಂತಾದ ಭಾವನಾತ್ಮಕ ವಿಷಯಗಳ ಬಗ್ಗೆ ಮಾತ್ರ ಕಾನೂನು ರೂಪಿಸುತ್ತಿದೆ.

ಶ್ರೀಮತಿ ಇಂದಿರಾ ಗಾಂಧಿ ಮತ್ತು ದೇವರಾಜ ಅರಸು ಅವರು ಉಳುವವನೆ ಭೂಮಿಯ ಒಡೆಯ ಎಂಬ ಕಾನೂನು ತಂದಿದ್ದರೆ, ಬಿಜೆಪಿ ಸರ್ಕಾರ ಬಂದು ಉಳ್ಳವರನ್ನೇ ಭೂಮಿಯೊಡೆಯ ಮಾಡಿದೆ. ನಾವು ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದು ಹಟ್ಟಿಗಳು, ತಾಂಡಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿದೆವು. ಈ ಬಿಜೆಪಿ ಸರ್ಕಾರ ಆರ್.ಎಸ್.ಎಸ್ ಹಾಕುವ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ಸಂವಿಧಾನ ವಿರೋಧಿ ಕಾನೂನುಗಳನ್ನು ಜಾರಿ ಮಾಡುತ್ತಿದೆ.

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ 2013 ರವರೆಗೆ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಏಳು ವರ್ಷಗಳಲ್ಲೇ ಈ ಸಾಲ 135 ಲಕ್ಷ ಕೋಟಿಗೆ ಏರಿದೆ. ಇದೇನಾ ಅಚ್ಚೇ ದಿನ್? ಸ್ವಾತಂತ್ರ್ಯ ಬಂದಾಗಿನಿಂದ ನಾವು ಅಧಿಕಾರದಲ್ಲಿದ್ದ ಕೊನೇ ವರ್ಷದ ವರೆಗೆ ಇದ್ದ ರಾಜ್ಯದ ಒಟ್ಟು ಸಾಲ 2 ಲಕ್ಷದ 45 ಸಾವಿರ ಕೋಟಿ ರೂಪಾಯಿ. ಈಗಿನ ಬಿಜೆಪಿ ಸರ್ಕಾರದ ಎರಡು ವರ್ಷದ ದುರಾಡಳಿತದಿಂದ ಈ ಸಾಲ 4 ಲಕ್ಷದ 57 ಸಾವಿರ ಕೋಟಿಗೆ ಏರಿಕೆಯಾಗಿದೆ. ಅಭಿವೃದ್ಧಿ ಮೇಲೆ ಮತ ಕೇಳುತ್ತೇವೆ ಎನ್ನುವ ಬೊಮ್ಮಾಯಿ ಅವರ ಆಡಳಿತದಲ್ಲಿ ಸಾಲದ ಪ್ರಮಾಣ ಮಾತ್ರ ಬೆಳವಣಿಗೆ ಆಗುತ್ತಿದೆ.

ದೇಶವನ್ನು ಉಳಿಸುವುದಕ್ಕಾಗಿ ನಾವೆಲ್ಲಾ ಕಾಂಗ್ರೆಸ್ ಪಕ್ಷವನ್ನು ಉಳಿಸಬೇಕಿದೆ, ಬೆಳೆಸಬೇಕಿದೆ. ಕಾಂಗ್ರೆಸ್ ನಮ್ಮ ನಿಮ್ಮೆಲ್ಲರ, ಜನ ಸಾಮಾನ್ಯರ ಪಕ್ಷ ಎಂಬುದನ್ನು ನೆನಪಿನಲ್ಲಿಟ್ಟುಕೊಂಡು, ಪಕ್ಷವನ್ನು ಬಲಪಡಿಸಲು ಒಂದಾಗಿ ದುಡಿಯೋಣ ಎಂದು ಕರೆ ನೀಡುತ್ತೇನೆ.

Siddaramaiah Said: Save Congress to Save Country

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್ ಸುರಕ್ಷತೆಗೆಗಾಗಿ ನೀವು ಅನುಸರಿಸಬೇಕಿರುವ ಸೂತ್ರಗಳಿವು

Tags: Congress partySiddaramaiahTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In