ಜಾರ್ಖಂಡ್: ಸರ್ಕಾರ ಜನತೆಗೆ ಸಿಹಿ ಸುದ್ದಿ ನೀಡಿದೆ. ಜನವರಿ 26 ರಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಲು ಸಿದ್ಧವಾಗಿದೆ.
ಈ ಕುರಿತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಜನವರಿ 26 ರಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರಿ ಇಳಿಕೆ ಆಗಲಿದೆ.
ನಿರ್ದಿಷ್ಟವಾಗಿ ಬಡವರಿಗೆ ಅಥವಾ ಬಡತನ ರೇಖೆಗಿಂತ ಕೆಳಗಿರುವವರಿಗೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸಲಾಗುವುದು ಎಂದು ಸೊರೆನ್ ಮಹತ್ವದ ಘೋಷಣೆ ಮಾಡಿದ್ದಾರೆ.
ರಾಂಚಿಯ ಮೊರಬಡಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೇಮಂತ್ ಸೊರೆನ್, ಈ ಘೋಷಣೆ ಮಾಡಿದ್ದು, ಅದರಲ್ಲೂ ಈವಿಶೇಷ ನಿಯಮ ದ್ವಿಚಕ್ರ ವಾಹನ ಹೊಂದಿರುವವರಿಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
Petrol and diesel will be priced at Rs 25. Decrease.
Discussion about this post