ಸೆಂಚುರಿಯನ್: ಭಾರತದ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿಕಾಕ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಪ್ರಕಟಿಸಿದ್ದಾರೆ. ತಕ್ಷಣದಿಂದಲೇ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತನಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಡಿಕಾಕ್ ಅವರಿಗೆ ಈಗ ಕೇವಲ 29 ವರ್ಷ ವಯಸ್ಸು. ಹೀಗಾಗಿ ಅವರು ನಿವೃತ್ತಿ ಘೋಷಿಸಿರುವುದು ಕ್ರಿಕೆಟ್ ವಲಯದಲ್ಲಿ ಅಚ್ಚರಿಕೆ ಕಾರಣವಾಗಿದೆ. ಆದರೆ, ನಿಗದಿತ ಓವರ್ಗಳ ಪಂದ್ಯಗಳಲ್ಲಿ (ಏಕದಿನ ಹಾಗೂ ಟ್ವೆಂಟಿ–20) ತಂಡದ ಪರವಾಗಿ ಆಟ ಮುಂದುವರಿಸುವುದಾಗಿ ಅವರು ತಿಳಿಸಿದ್ದಾರೆ.
ಕುಟುಂಬದವರ ಬಗ್ಗೆ ಹೆಚ್ಚಿನ ಗಮನಹರಿಸಲು ಮತ್ತು ನಿಗದಿತ ಓವರ್ಗಳ ಕ್ರಿಕೆಟ್ ಮೇಲೆ ಹೆಚ್ಚು ಗಮನಹರಿಸುವುದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಡಿಕಾಕ್ ತಿಳಿಸಿದ್ದಾರೆ ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಡಿಕಾಕ್ ಅವರ ಪತ್ನಿ ಗರ್ಭಿಣಿಯಾಗಿದ್ದು, ಭಾರತದ ಎದುರಿನ 2ನೇ ಮತ್ತು 3ನೇ ಟೆಸ್ಟ್ಗೆ ಅವರು ಲಭ್ಯರಿರುವುದಿಲ್ಲ ಎಂದು ಈಗಾಗಲೇ ತಿಳಿಸಲಾಗಿತ್ತು.
ಡಿಕಾಕ್ ಅವರು ಈವರೆಗೆ 54 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು, 3,300 ರನ್ ಕಲೆ ಹಾಕಿದ್ದಾರೆ. ಕೀಪರ್ ಆಗಿ 221 ಕ್ಯಾಚ್, 11 ಸ್ಟಂಪ್ ಮಾಡಿದ್ದಾರೆ. 4 ಪಂದ್ಯಗಳಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದಾರೆ.
ಇದನ್ನೂ ಓದಿ : India vs South Africa Test: ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನ ನಗು ಬೀರಿದ ಭಾರತ
Discussion about this post