Bengaluru News: ಸಿಎಂ ಸಿದ್ದರಾಮಯ್ಯ ಅವರು ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ಪ್ರೇಮ್‌ಕಹಾನಿ ಬಗ್ಗೆ ಹೇಳಿದ್ದಾರೆ.
ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಹೇಳಿದ್ದಾರೆ.
ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ. ಇದಕ್ಕಾಗಿ ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ.
ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.
ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟಿಸಿ ಮಾತನಾಡಿದೆ.
ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ.
ಅಂತರ್ಜಾತಿ ವಿವಾಹಗಳ… pic.twitter.com/Woud16ITJ4
— Siddaramaiah (@siddaramaiah) May 23, 2024
Health Tips: ಡ್ರೈಫ್ರೂಟ್ಸ್ ಸೇವನೆಯಿಂದ ಏನು ಲಾಭ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
Discussion about this post