Political News: ಇಂದು ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ(CM Sidddaramaiah), ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕಾಗುತ್ತದೆ ಎಂದಿದ್ದಾರೆ.
ನಮ್ಮ ಹೈಕಮಾಂಡ್‌ನವರು ನನ್ನ ಪುತ್ರ ಡಾ|| ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಈಗಿನ ಅವರ ನಿರ್ಧಾರ ಏನೆಂದು ನನಗೆ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದಲೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(H.D.Kumaraswamy) ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್(D.K.Shivakumar) ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂದು ನಂಬಿರುವುದೇ ನಿಮ್ಮ ತಪ್ಪು. ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೋ ಇಲ್ಲವೋ ಕಾದು ನೋಡಬೇಕು ಎಂದು ಸಿಎಂ ಹೇಳಿದ್ದಾರೆ.
ದೇವೇಗೌಡರು ಪ್ರಜ್ವಲ ರೇವಣ್ಣ(Prajwal Revanna) ಅವರನ್ನು ಕುಟುಂಬದಿಂದ ಹೊರಹಾಕುತ್ತೇವೆ ಎಂದಿದ್ದಾರೆ. ದೇವೇಗೌಡರಿಗೆ ಗೊತ್ತಿಲ್ಲದೆ ಪ್ರಜ್ವಲ್ ವಿದೇಶಕ್ಕೆ ಹೊರಟು ಹೋಗಿದ್ದಾರಾ? ಹೆಚ್.ಡಿ.ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇರಲಿಲ್ಲ ಎಂದು ಈಗ ಹೇಳುತ್ತಿದ್ದಾರೆ. ಚುನಾವಣೆಯಲ್ಲಿ ಪ್ರಜ್ವಲ್ ನನ್ನ ಮಗ, ಅವನಿಗೆ ಮತ ನೀಡಿ ಎಂದು ಪ್ರಚಾರ ಮಾಡಿದ್ದರು. ಇದು ಸಂಪರ್ಕವೋ? ಅಲ್ಲವೋ? ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್ .ಐ.ಟಿ ಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಎಸ್.ಐ.ಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು, ಸತ್ಯಾಸತ್ಯತೆಗಳನ್ನು ಹೊರತರಲು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಲಾ ಕಾಲೇಜು ಸ್ನೇಹಿತೆ ಬಗ್ಗೆ ಮಾತನಾಡಿದ ಸಿಎಂ
Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು
Discussion about this post