ನವದೆಹಲಿ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಯುವ ಆಟಗಾರ ಅಜಿಂಕ್ಯ ರಹಾನೆ ಅವರನ್ನು ಟೀಂ ಇಂಡಿಯಾ ನಾಯಕನನ್ನಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ.
ನವೆಂಬರ್ 17ರಿಂದ ಆರಂಭವಾಗಲಿರುವ ಟ್ವೆಂಟಿ–20 ಸರಣಿಗೆ ನೂತನ ನಾಯಕನಾಗಿ ಆಯ್ಕೆಯಾಗಿರುವ ರೋಹಿತ್ ಶರ್ಮಾ ಅವರಿಗೆ ಟೆಸ್ಟ್ ಸರಣಿಯಿಂದ ವಿರಾಮ ನೀಡಲಾಗಿದೆ. ಮೊದಲ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಸಹ ಆಡುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಪ್ರಕಟಿಸಲಾದ 15 ಮಂದಿಯ ತಂಡದಲ್ಲಿ ಕನ್ನಡಿಗರಾದ ಕೆ.ಎಲ್.ರಾಹುಲ್, ಮಯಂಕ್ ಅಗರ್ವಾಲ್ ಮತ್ತು ಪ್ರಸಿದ್ಧ ಕೃಷ್ಣ ಅವರಿಗೂ ಸ್ಥಾನ ದೊರೆತಿದೆ.
ಇದನ್ನೂ ಓದಿ: ರೋಹಿತ್ ಶರ್ಮಾ ಪೂರ್ಣಾವಧಿ ನಾಯಕರಾಗಲಿ ಎಂದ ಶಾಹೀದ್ ಅಫ್ರೀದಿ ಕೊಹ್ಲಿಗೆ ನೀಡಿದ ಸಲಹೆ ಏನು?
ಟೆಸ್ಟ್ ಪಂದ್ಯಗಳು ಕ್ರಮವಾಗಿ ಕಾನ್ಪುರ, ಮುಂಬೈಯಲ್ಲಿ ಕ್ರಮವಾಗಿ ನವೆಂಬರ್ 25 – 29 ಹಾಗೂ ಡಿಸೆಂಬರ್ 3 – 7ರ ವರೆಗೆ ನಡೆಯಲಿದೆ.
ವಿಕೆಟ್ ಕೀಪರ್ ರಿಷಭ್ ಪಂತ್, ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಕೂಡ ವಿಶ್ರಾಂತಿ ಪಡೆದಿದ್ದಾರೆ. ವಿಕೆಟ್ ಕೀಪರ್ ಆಗಿ ವೃದ್ಧಿಮಾನ್ ಸಹ ಆಯ್ಕೆಯಾಗಿದ್ದಾರೆ. ಕೆ.ಎಸ್.ಭರತ್ ಅವರನ್ನೂ ತಂಡದಲ್ಲಿ ಸೇರ್ಪಡೆ ಮಾಡಲಾಗಿದೆ.
ಬಿಸಿಸಿಐ ಪ್ರಕಟಿಸಿರುವ 15 ಮಂದಿಯ ತಂಡ ಹೀಗಿದೆ;
ಅಜಿಂಕ್ಯ ರಹಾನೆ (ನಾಯಕ), ಕೆ.ಎಲ್. ರಾಹುಲ್, ಮಯಂಕ್ ಅಗರ್ವಾಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ಹನುಮವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಆರ್. ಅಶ್ವಿನ್, ಉಮೇಶ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕೆ.ಎಸ್. ಭರತ್, ರವೀಂದ್ರ ಜಡೇಜಾ.
#TeamIndia squad for NZ Tests:
A Rahane (C), C Pujara (VC), KL Rahul, M Agarwal, S Gill, S Iyer, W Saha (WK), KS Bharat (WK), R Jadeja, R Ashwin, A Patel, J Yadav, I Sharma, U Yadav, Md Siraj, P Krishna
*Virat Kohli will join the squad for the 2nd Test and will lead the team. pic.twitter.com/FqU7xdHpjQ
— BCCI (@BCCI) November 12, 2021
Discussion about this post