ಬೆಂಗಳೂರು: ರಾಜ್ಯಾದ್ಯಂತ ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳನ್ನು ಪುನರ್ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತಿತ್ತು. ಕೋವಿಡ್-19 ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವ ಹಾಗೂ ಲಸಿಕೆ ಪಡೆದಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಮೂಲಕ ಸೇವೆಗಳನ್ನು ಒದಗಿಸಲು 2 ಗಂಟೆಗಳ ಕಾಲ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾರ್ಗಸೂಚಿ ಈ ಕೆಳಗಿನಂತಿವೆ. ಅಂಗನವಾಡಿ ಕೇಂದ್ರಗಳಿಗೆ ಹಾಜರಾಗಲು ಇಚ್ಛಿಸುವ ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಅಂಗನವಾಡಿ ಕಾರ್ಯಕರ್ತೆಯರು ಪಡೆಯಬೇಕು.
- ಅಂಗವಾಡಿ ಕೇಂದ್ರಗಳ ಫಲಾನುಭವಿಗಳ ಎಲ್ಲಾ ಪೋಷಕರು 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು.
ಕೋವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾಂಭಿಸಬೇಕು. - ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯುವುದು. ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಎರಡು ಡೋಸ್ ಲಸಿಕೆ ಪಡೆದಿರಬೇಕು.
- ಕೇಂದ್ರದ ಒಳ ಆವರಣ ಮತ್ತು ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಬೇಕು.
- ಪಾಕೋಪಕರಣ, ಜಮಖಾನ, ಡೆಸ್ಕ್, ಕುರ್ಚಿ, ಆಟಿಕೆ ಸಮಾನುಗಳನ್ನು ಅಂಗನವಾಡಿ ಪ್ರಾರಂಭದ ಹಿಂದಿನ ದಿನ ಶುಚಿಗೊಳಿಸಬೇಕು.
- ಶೌಚಾಲಯ, ಅಂಗನವಾಡಿಯ ನೆಲ, ಗೋಡೆ, ಕಿಟಕಿ, ಬಾಗಿಲು ಮುಂತಾದವುಗಳನ್ನು ಸೋಪಿನ ದ್ರಾವಣದಲ್ಲಿ ಸ್ವಚ್ಛಗೊಳಿಸುವುದು
- ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಗ್ರಾಮ ಪಂಚಾಯ್ತಿ ಮತ್ತು ಬಾಲವಿಕಾಸ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡಬೇಕು.
Anganwadi begins from November 8 across the state
ಇದನ್ನೂ ಓದಿ: covid vaccine: ಕೋವಿಡ್ ಲಸಿಕೆಗಳನ್ನು ಮನೆ-ಮನೆಗೆ ತೆಗೆದುಕೊಂಡು ಹೋಗಬೇಕು
ಇದನ್ನೂ ಓದಿ:Heavy rain: ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ

























Discussion about this post