ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ತಳಿ ಒಮಿಕ್ರಾನ್ ಮತ್ತೊಂದು ಪ್ರಕರಣ ದೃಢಪಟ್ಟಿದೆ. ಇದು ರಾಜ್ಯದಲ್ಲಿ ಪತ್ತೆಯಾದ 3ನೇ ಪ್ರಕರಣವಾಗಿದೆ.

ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಕೆ. ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ದಕ್ಷಿಣ ಆಫ್ರಿಕದಿಂದ ರಾಜ್ಯಕ್ಕೆ ಆಗಮಿಸಿರುವ 34 ವರ್ಷದ ಯುವಕನೋರ್ವ ಒಮಿಕ್ರಾನ್ ಗೆ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಆತನಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಐದು ಮಂದಿ ಹಾಗೂ 15 ಜನ ದ್ವಿತೀಯ ಸಂಪರ್ಕಿತರನ್ನು ಗುರುತಿಸಲಾಗಿದೆ. ಅವರೆಲ್ಲರ ಗಂಟಲದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Another COVID-19 variant variety omykron discovered in the state

























Discussion about this post