ಚಿಕ್ಕಮಗಳೂರು: ನಗರದ ಹೊರವಲಯದ ತೇಗೂರಿನಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಅರಸು ಸಮುದಾಯ ಭವನವನ್ನು ಅಕ್ಟೋಬರ್ 31 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಜಿಲ್ಲಾ ಅರಸು ಸಂಘದ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತೇಗೂರಿನಲ್ಲಿ 3.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಅರಸ್ ಸಮುದಾಯ ಭವನವನ್ನು ಅ.31 ರ ಭಾನುವಾರ ಮೈಸೂರಿನ ಅರಸು ವಂಶಸ್ಥರಾದ ಯದುವೀರ ಕೃಷ್ಟದತ್ತ ಚಾಮರಾಜ ಒಡೆಯರ್ ದಿವ್ಯ ಸಾನಿದ್ಯದಲ್ಲಿ ರಾಜ್ಯದ ಸಿಎಂ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.
ಶಾಸಕರಾದ ಸಿ.ಟಿ.ರವಿಯವರು ಘನ ಉಪಸ್ಥಿತಿ ಇರಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವೆ ಶೋಭಾಕರಂದ್ಲಾಜೆ, ಕೋಟಾಶ್ರೀನಿವಾಸಪೂಜಾರಿ, ಶಾಸಕರುಗಳಾದ ಬೆಳ್ಳಿಪ್ರಕಾಶ್, ಸುರೇಶ್, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸದಸ್ಯ ಭೋಜೇಗೌಡ, ಭಾರತಿಶೆಟ್ಟಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಮುದಾಯ ಭವನದಲ್ಲಿ ಸಾಮೂಹಿಕ ವಿವಾಹ ಜತೆಗೆ ಉಪನಯನ ಕಾರ್ಯಕ್ರಮಗಳ ಜತೆಗೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಘವು ಯೋಜನೆ ಕೈಗೊಳ್ಳಲಿದೆ ಎಂದು ತಿಳಿಸಿದರು. ಬೃಹತ್ ಸಮುದಾಯ ಭವನ ನಿರ್ಮಾಣಕ್ಕೆ ಕ್ಷೇತ್ರದ ಜನಪ್ರತಿನಿಧಿಗಳು, ಜಿಲ್ಲಾ ತಾಲ್ಲೂಕು ಪಂಚಾಯಿತಿ ಸದಸ್ಯರು ಅನುದಾನ ಬಿಡುಗಡೆಗೊಳಿಸುವ ಮೂಲಕ ಪೂರ್ಣಗೊಳ್ಳಲು ಸಹಕರಿಸಿದ್ದಾರೆ ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅರಸು ಸಂಘದ ಪ್ರಧಾನ ಕಾರ್ಯದರ್ಶಿ ಭೋಜರಾಜ್‌ಅರಸ್, ಖಜಾಂಚಿ ಸತ್ಯನಾರಾಯಣರಾಜು, ಸಹಕಾರ್ಯದರ್ಶಿ ನಾಗೇಶ್‌ರಾಜ್‌ಅರಸ್, ನಿರ್ದೇಶಕ ಲೋಕೇಶ್, ಯೋಗೇಶ್ ಉಪಸ್ಥಿತರಿದ್ದರು.

























Discussion about this post