ನವದೆಹಲಿ: ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆ ಪಡೆದ ವ್ಯಕ್ತಿಗಳಿಗೆ ಆಸ್ಟ್ರೇಲಿಯಾ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಆಸ್ಟ್ರೇಲಿಯಾ ಹೈ ಕಮಿಷನರ್ ಬ್ಯಾರಿ ಓಫಾರೆಲ್ ಹೇಳಿದ್ದಾರೆ.
ಆಸ್ಟ್ರೇಲಿಯದ ಔಷಧಿ ಮತ್ತು ಲಸಿಕೆ ನಿಯಂತ್ರಣ ಮಂಡಳಿ “ಚಿಕಿತ್ಸಕ ಸರಕುಗಳ ಆಡಳಿತವು”(ಟಿಜಿಎ) ವರದಿ ಆಧರಿಸಿ ಬ್ಯಾರಿ ಓಫಾರೆಲ್ ಈ ಹೇಳಿಕೆ ನೀಡಿದ್ದು, ಆಸ್ಟ್ರೇಲಿಯಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿಸುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊವ್ಯಾಕ್ಸಿನ್ ಪರಿಣಾಮಕಾರಿತ್ವವನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಕೊವ್ಯಾಕ್ಸಿನ್ ಪರಿಣಾಮಕಾರಿಯಾಗಿದ್ದು ಅದು ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ ಎಂದು ವರದಿಗಳ ಆಧಾರದ ಮೇಲೆ ಟಿಎಜಿ ನಿರ್ಧಾರ ಮಾಡಿದ್ದು ಅನುಮತಿಗೆ ಒಪ್ಪಿದೆ. ಆಸ್ಟ್ರೇಲಿಯಾ ಸರ್ಕಾರದ ಈ ನಿರ್ಧಾರದಿಂದ ಲಕ್ಷಾಂತರ ಭಾರತೀಯ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಗೆ ಅನುಕೂಲವಾಗಲಿದ್ದು, ಹೆಚ್ಚು ಜನರ ಸಂಚಾರಕ್ಕೆ ಸಹಕಾರಿಯಾಗಲಿದೆ.
Those vaccinated with covaccine can go on a trip to Australia.
ಇದನ್ನೂ ಓದಿ: GST: ಅಕ್ಟೋಬರ್ನಲ್ಲಿ 1.30 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ
ಇದನ್ನೂ ಓದಿ: Increase to 5 lakhs: ರಾಜ್ಯೋತ್ಸವ ಪ್ರಶಸ್ತಿಯ ಮೊತ್ತ 1 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
Discussion about this post