ಶಬರಿಮಲೆ: ಕೇರಳ, ಆಂಧ್ರಪ್ರದೇಶದಲ್ಲಿ ಎಡೆಬಿಡದೆ ಮಳೆಸುರಿಯುತ್ತಿದ್ದು, ಪಂಬಾ ಹಾಗೂ ಇತರೆ ನದಿಗಳ ನೀರಿನ ಮಟ್ಟ ಹೆಚ್ಚುತ್ತಿದೆ. ಈ ಹಿನ್ನೆಲೆ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಶನಿವಾರ ಭಕ್ತರ ಯಾತ್ರೆಯನ್ನು ನಿಷೇಧಿಸಲಾಗಿದೆ.
ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿಯುತ್ತಿವೆ. ಈ ವೇಳೆ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಇಂದು ಶಬರಿಮಲೆಗೆ ಯಾತ್ರೆಯನ್ನು ನಿಷೇಧ ಮಾಡಲಾಗಿದೆ ಎಂದು ಪಥನಾಂತಿಟ್ಟ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಪಂಬಾ ನದಿಯಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ ಜೊತೆಗೆ ಕಕ್ಕಿ-ಆನಾತೋಡ್ ಜಲಾಶಯಗಳ ಗೇಟ್‌ಗಳನ್ನು ತೆರೆಯಲಾಗಿದೆ. ಭಕ್ತರ ಸುರಕ್ಷತೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

























Discussion about this post