ಕೋಲ್ಕತ್ತಾ: ಕೋವಿಡ್–19 ಸೋಂಕು ತಗುಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮನೆಗೆ ಮರಳಿದ್ದಾರೆ. ಆದರೆ, ಅವರಿನ್ನೂ ಸಂಪೂರ್ಣ ಚೇತರಿಸಿಕೊಂಡಿಲ್ಲ, ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗಂಗೂಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಸೋಮವಾರ ರಾತ್ರಿ ದೃಢಪಟ್ಟಿತ್ತು. ಬಳಿಕ ಅವರನ್ನು ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಗೂಲಿ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ನಂತರ ಪ್ರಕಟಣೆಯಲ್ಲಿ ತಿಳಿಸಿದ್ದರು.
ಗಂಗೂಲಿ ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದಿದ್ದಾರೆ.
ಗಂಗೂಲಿ ಅವರು ಈಗಾಗಲೇ ಎದೆ ನೋವಿನಿಂದ ಈ ವರ್ಷ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. 2021ರ ಜನವರಿಯಲ್ಲಿ ಅವರಿಗೆ ಲಘು ಹೃದಯಾಘಾತವಾಗಿತ್ತು. ಹೃದಯದ ರಕ್ತನಾಳಗಳಲ್ಲಿ ಬ್ಲಾಕ್‌ಗಳು ಇರುವುದು ಗೊತ್ತಾಗಿತ್ತು. ನಂತರ ಆ್ಯಂಜಿಯೊಪ್ಲಾಸ್ಟಿ ನಡೆಸಿ ಎರಡು ಸ್ಟಂಟ್ ಅಳವಡಿಸಲಾಗಿತ್ತು.
ಇದನ್ನೊ ಓದಿ : ಭಾರತದ ವಿರುದ್ಧ ಸೋಲಿನ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕ್ವಿಂಟನ್ ಡಿಕಾಕ್
Discussion about this post