ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ: Damaged crop: ಅಕಾಲಿಕ ಮಳೆಯಿಂದ ಹಾನಿಯಾದ ಬೆಳೆಗೆ ಪರಿಹಾರ ನೀಡಲು ಜಿಲ್ಲಾ ಕಾಂಗ್ರೆಸ್ ಒತ್ತಾಯ
ಸುದ್ದಿಗಾರೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ದಾಖಲೆ ಯಾವುದೇ ಪಕ್ಷದವರು ಕೊಟ್ಟರೂ ನಿಶ್ಚಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ.ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಇದನ್ನೂ ಓದಿ: Innovator: ತೆರೆದ ತೋಳುಗಳಿಂದ ನವೋದ್ಯಮಿಗಳನ್ನು ಸ್ವಾಗತಿಸುತ್ತದೆ ಕರ್ನಾಟಕ
ಕಾಂಗ್ರೆಸ್ ನಲ್ಲಿ ಎರಡು ಬಣಗಳು ಇರುವುದು ಜಗಜ್ಜಾಹೀರು. ವಿರೋಧ ಪಕ್ಷದವರ ವಿರುದ್ಧ ಹೇಳಿಕೆ ನೀಡುವುದಿಲ್ಲ ಎಂದರು. ಬೆಳೆ ಹಾನಿಯ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಅಧಿಕಾರಿಗಳಿಗೆ ಸಮೀಕ್ಷೆ ಮಾಡಲು ತಿಳಿಸಿದ್ದಾರೆ.
ಎಲ್ಲಿ ಬೆಳೆನಾಶವಾಗಿದೆಯೋ ಅಲ್ಲಿ ಪರಿಹಾರ ಕೊಡುವ ಕ್ರಮಕೈಗೊಳ್ಳುತ್ತಾರೆ ಎಂದಿದ್ದಾರೆ.
Bitcoin case: Appropriate action against anyone involved
Discussion about this post