ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿದ್ದ ಎಂ.ಕೆ ಪ್ರಾಣೇಶ್ 6 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ಬಹಳ ಕುತೂಹಲ ಹಾಗೂ ಜಿದ್ದಾ ಜಿದ್ದಿನ ಕ್ಷೇತ್ರವಾಗಿದ್ದ ಚಿಕ್ಕಮಗಳೂರು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಹೊರಬಿದ್ದಿದೆ.
ಬಿಜೆಪಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಅವರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಗಾಯತ್ರಿ ಶಾಂತೇಗೌಡ ಅವರು ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿದ್ದರು. ಬಿಜೆಪಿಯ ಎಂ.ಕೆ ಪ್ರಾಣೇಶ್ ಅವರು ಎರಡನೇ ಬಾರಿಗೆ ಗೆಲುವನ್ನು ತಮ್ಮದಾಗಿಸಿಕೊಂಡರೆ. ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಸೋಲನ್ನು ಅನುಭವಿಸಿದ್ದಾರೆ.
BJP candidate M K Pranesh wins by 6 votes
























Discussion about this post