ಬೆಂಗಳೂರು: 20 ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ನ 25 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳಲ್ಲಿ ನಿಶ್ಚಿತವಾಗಿ ಗೆಲ್ಲಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಜಿಲ್ಲಾ ಪ್ರವಾಸಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ವಾತಾವರಣ ನಮಗೆ ತುಂಬಾ ಅನುಕೂಲಕರವಾಗಿದೆ. ನಾವು ಚುನಾವಣೆ ನಡೆಯುತ್ತಿರುವ ೨೫ ಸ್ಥಾನಗಳಲ್ಲಿ ೨೦ ಕಡೆ ಮಾತ್ರ ಸ್ಪರ್ಧೆ ಮಾಡಿದ್ದೇವೆ. ಅದರಲ್ಲಿ ೧೫ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.
ಪರಿಷತ್ನ ಚುನಾವಣೆ ಹಿನ್ನೆಲೆ ಇಂದಿನಿಂದ ನ.೨೯ರವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ ವ್ಯಾಪ್ತಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪ್ರವಾಸ ಕೈಗೊಂಡು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಇಂದು ಚನ್ನಗಿರಿ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಸದಸ್ಯರು ಸಮಾವೇಶದಲ್ಲಿ ಭಾಗವಹಿಸಲಿರುವ ಬಿಎಸ್ವೈ, ಸಂತೆಬೆನ್ನೂರಿನಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದು, ಸಂಜೆ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಬೆಳಗ್ಗೆ ೧೧ ಗಂಟೆಗೆ ಶಿಕಾರಿಪುರದಲ್ಲಿ ನಡೆಯಲಿರುವ ಶಿಕಾರಿಪುರ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಸದಸ್ಯರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ಶಿರಾಳಕೊಪ್ಪದಲ್ಲಿ ನಡೆಯಲಿರುವ ಶಿಕಾರಿಪುರ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಾವೇಶದಲ್ಲಿ ಭಾಗವಹಿಸಿ ಶಿಕಾರಿಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಶುಕ್ರವಾರ ಮಧ್ಯಾಹ್ನ ೩ ಗಂಟೆಗೆ ದಾವಣಗೆರೆಯಲ್ಲಿ ನಡೆಯುವ ದಾವಣಗೆರೆ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಾಜದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೬ ಗಂಟೆಗೆ ಮಾಯಕೊಂಡ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಾವೇಶ ಮಾಯಕೊಂಡದಲ್ಲಿ ನಡೆಯಲಿದ್ದು ಅಲ್ಲಿ ಭಾಗವಹಿಸಲಿರುವ ಅವರು ಶಿವಮೊಗ್ಗಕ್ಕೆ ವಾಪಸ್ ಆಗಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಶನಿವಾರ ಬೆಳಗ್ಗೆ ೧೦.೩೦ಕ್ಕೆ ಶಿವಮೊಗ್ಗದಲ್ಲಿ ನಡೆಯಲಿರುವ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಾವೇಶದಲ್ಲಿ ಭಾಗವಹಿಸಲಿದ್ದು, ಮಧ್ಯಾಹ್ನ ೩ ಗಂಟೆಗೆ ತೀರ್ಥಹಳ್ಳಿ ಯಲ್ಲಿ ನಡೆಯಲಿರುವ ತೀರ್ಥಹಳ್ಳಿ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ
Bjp is certainly ಗೆlಲವು in 15 seats

























Discussion about this post