ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಸಹಕಾರಿ ತತ್ವವನ್ನು ಮೈಗೂಡಿಸಿಕೊಳ್ಳ ಬೇಕು ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ಟಿ.ವಿರೇಶ್ ಸಲಹೆ ಮಾಡಿದರು.
ನಗರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿಯಲ್ಲಿ ನಿಗಮದ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ಹೊರತಂದಿರುವ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಎಲ್ಲರೂ ಸಹಕಾರಿ ತತ್ವವನ್ನು ಮೈಗೂಡಿಸಿಕೊಂಡು ಒಬ್ಬರಿಗೊಬ್ಬರು ಸಹಾಯಹಸ್ತ ಚಾಚಿದರೆ ಎಂತಹ ಕಠಿಣ ಸಮಸ್ಯೆಯಾದರೂ ನಿವಾರಣೆಯಾಗುವುದರ ಜೊತೆಗೆ ನಮ್ಮಲ್ಲಿ ಒಗ್ಗಟ್ಟು ಮೂಡುತ್ತದೆ ಎಂದು ಕಿವಿಮಾತು ಹೇಳಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ತಮ್ಮ ಅಭಿವೃದ್ಧಿಗಾಗಿ ನಿಗಮದ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗಬೇಕು ಎಂದು ಸಲಹೆ ಮಾಡಿದರು.
ಸಂಘದ ಅಧ್ಯಕ್ಷ ಟಿ.ಆರ್.ಸುಂದರೇಶ್ ಮಾತನಾಡಿ, ತಮ್ಮ ಸಂಸ್ಥೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸದ ಸ್ಯರ ಅಭಿವೃದ್ಧಿಗಾಗಿ ನಿರಂತರವಾಗಿ ದುಡಿಯುತ್ತಿದೆ ಎಂದು ತಿಳಿಸಿದರು. ಸಂಘದ ಕಾರ್ಯದರ್ಶಿ ಎಚ್.ಎಸ್.ಶಿವಪ್ರಕಾಶ್, ಉಪಾಧ್ಯಕ್ಷ ಹಾಲಪ್ಪ, ನಿದೇರ್ಶಕರಾದ ಎಂ.ಪಿ.ಪ್ರಕಾಶ್, ಚಿಕ್ಕೆಗೌಡ ಉಪಸ್ಥಿತರಿದ್ದರು.
Calendar Release
























Discussion about this post