ಬಾಂಗ್ಲಾದೇಶ: ದಕ್ಷಿಣ ಬಾಂಗ್ಲಾದೇಶದಲ್ಲಿ ಸರಕುಗಳು ಹಾಗೂ ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 32 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ಢಾಕಾದಿಂದ ದಕ್ಷಿಣಕ್ಕೆ 250 ಕಿಲೋಮೀಟರ್ ಜಕಾಕತಿ ನಗರದ ಬಳಿ ಈ ಘಟನೆ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ಮೊಯಿನುಲ್ ಇಸ್ಲಾಂ, ನದಿ ಭಾಗದಲ್ಲಿ ದೋಣಿಯ ಮೂರನೇ ಮಹಡಿಯಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಇದರ ಪರಿಣಾಮ 32 ಮಂದಿ ಮೃತಪಟ್ಟಿದ್ದಾರೆ.
ಇವರೆಲ್ಲರ ಮೃತದೇಹ ಹೊರತೆಗೆಯಲಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದಿದ್ದಾರೆ.
Cargo boat catches fire
























Discussion about this post