ನವದೆಹಲಿ: ಮುಂದಿನ ವರ್ಷದ ಐಪಿಎಲ್ ಟಿ–20 ಕ್ರಿಕೆಟ್ ಟೂರ್ನಿಯು ಏಪ್ರಿಲ್ 2ರಂದು ಚೆನ್ನೈಯಲ್ಲಿ ಆರಂಭಗೊಳ್ಳುವ ನಿರೀಕ್ಷೆ ಇದೆ.
ಪಂದ್ಯಗಳ ವೇಳಾಪಟ್ಟಿ ಇನ್ನೂ ಸಿದ್ಧವಾಗಿಲ್ಲ. ಆದರೆ ಏಪ್ರಿಲ್ 2ರಂದು ಚೆನ್ನೈಯಲ್ಲಿ ಐಪಿಎಲ್ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಫ್ರಾಂಚೈಸಿಗಳಿಗೆ ಈಗಾಗಲೇ ಮಾಹಿತಿ ನೀಡಿದೆ.
15ನೇ ಆವೃತ್ತಿಯ ಐಪಿಎಲ್ನಲ್ಲಿ ಅಹಮದಾಬಾದ್ ಮತ್ತು ಲಖನೌ ತಂಡಗಳ ಸೇರ್ಪಡೆಯೊಂದಿಗೆ ಒಟ್ಟು 10 ತಂಡಗಳು ಆಡಲಿವೆ. 74 ಪಂದ್ಯಗಳು ನಡೆಯಲಿದ್ದು, 60 ದಿನಗಳ ಕಾಲ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ತೀರ್ಮಾನಿಸಿದೆ ಎನ್ನಲಾಗಿದೆ. ಜೂನ್ ಮೊದಲ ವಾರ ಫೈನಲ್ ಪಂದ್ಯ ಆಯೋಜನೆಯಾಗುವ ನಿರೀಕ್ಷೆ ಇದೆ.
ಮುಂದಿನ ಐಪಿಎಲ್ ಟೂರ್ನಿಯನ್ನು ಭಾರತದಲ್ಲೇ ಆಯೋಜಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇತ್ತೀಚೆಗೆ ತಿಳಿಸಿದ್ದರು. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಹಾಲಿ ಚಾಂಪಿಯನ್ ಆಗಿರುವುದರಿಂದ ಆ ತಂಡದ ತವರಿನಲ್ಲೇ (ಚೆನ್ನೈ) ಐಪಿಎಲ್ ಆರಂಭವಾಗಲಿದೆ.
ಇನ್ನಷ್ಟು ಸುದ್ದಿಗಳು…
ವಿರಾಮದ ವೇಳೆ ವಿರಾಟ್ ಸೆಲ್ಫೀ: ಅನುಷ್ಕಾರನ್ನು ‘ಮೈ ರಾಕ್’ ಎಂದ ಕಿಂಗ್ ಕೊಹ್ಲಿ
ಟ್ವೆಂಟಿ-20 ಕ್ರಿಕೆಟ್ನಲ್ಲಿ ಅತಿಹೆಚ್ಚು ರನ್: ವಿರಾಟ್ ಕೊಹ್ಲಿಯ ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್
ನಾಯಕ ರೋಹಿತ್, ರಾಹುಲ್ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಟ್ವೆಂಟಿ-20 ಸರಣಿ ಗೆದ್ದ ಭಾರತ
Discussion about this post