ಹಾನಗಲ್: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 7598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಈ ಮೂಲಕ ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ 79,515 ಮತಗಳು ಸಿಕ್ಕಿವೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 921 ಮತಗಳನ್ನು ಪಡೆದಿದ್ದಾರೆ.

























Discussion about this post