ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 306 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ
ಇದನ್ನೂ ಓದಿ: Relaxation of restrictions: ಸೌದಿ ಅರೇಬಿಯಾ ಪ್ರಯಾಣ ನಿರ್ಬಂಧ ಸಡಿಲಿಕೆ
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಪತ್ತೆಯಾಗಿರುವ ಹೊಸ ಸೋಂಕು ಪ್ರಕರಣಗಳ ಮೂಲಕ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 29,94,561ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋರೋನಾದಿಂದಾಗಿ 2 ಸೋಂಕಿತರು ಸಾವನ್ನಪ್ಪಿದ್ದಾರೆ
ಇದನ್ನೂ ಓದಿ: cyclone attack: ರಾಜ್ಯಕ್ಕೆ ಇಂದು ಮತ್ತೊಂದು ಸೈಕ್ಲೋನ್ ದಾಳಿ
ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,187 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 224 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 29,49,853ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,492ಕ್ಕೆ ಕುಸಿದಿದೆ.
ಇದನ್ನೂ ಓದಿ: e Paper – November 26, 2021
ರಾಜಧಾನಿ ಬೆಂಗಳೂರಿನಲ್ಲಿ ಇಂದು 171 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಶೂನ್ಯ ಸಾವು ವರದಿಯಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12,55,611ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16,326ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 147 ಮಂದಿ ಸೋಂಕಿತರು ಗುಣಮುಖರಾಗಿದ್ದು, ನಗರದಲ್ಲಿ ಒಟ್ಟಾರೆ ಗುಣಮುಖರ ಪ್ರಮಾಣ 12,34,143ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಮರಣದಂಡನೆಯನ್ನು ಜೀವಾವಧಿಗೆ ತಗ್ಗಿಸಿದ ಬಾಂಬೆ ಹೈಕೋರ್ಟ್
Corona case increases

























Discussion about this post