ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಬೆಂಗಳೂರಿನಲ್ಲಿ 923 ಸೇರಿದಂತೆ ರಾಜ್ಯಾಧ್ಯಂತ 1187 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಬೆಳಗಾವಿ 12, ಬೆಂಗಳೂರು ನಗರ 923, ದಕ್ಷಿಣ ಕನ್ನಡ 63, ಧಾರವಾಡ 15, ಕೊಡಗು 12, ಮಂಡ್ಯ 10, ಮೈಸೂರು 20, ತುಮಕೂರು 12, ಉಡುಪಿ 54 ಸೇರಿದಂತೆ 1,187 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 3009557ಕ್ಕೆ ಏರಿಕೆಯಾಗಿದೆ. ಇಂದು 275 ಸೇರಿದಂತೆ 2960890 ಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 10,292 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
ಇನ್ನೂ ಬೆಂಗಳೂರು ನಗರದಲ್ಲಿ 03, ದಕ್ಷಿಣ ಕನ್ನಡ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿದಂತೆ ಆರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 38,346ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿಯಲ್ಲಿ ತಿಳಿಸಿದೆ.

























Discussion about this post