ಮೈಸೂರು: ಎದುರಾಗುವ ಕೋವಿಡ್ನ ಸಂಭಾವ್ಯ ಮೂರನೇ ಅಲೆಯನ್ನು ಎದರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಹೇಳಿದರು.
ಭಾನುವಾರ ಮೈಸೂರಿನ ಜೆ.ಎಸ್.ಎಸ್ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿದ್ದ 13 ಕೆ.ಎಲ್. ಸಾಮಾರ್ಥ್ಯದಆಕ್ಸಿಜನ್ಟ್ಯಾಂಕ್ಅನ್ನು ಹಾಗೂ 1 ಸಾವಿರ ಕೆ.ಎಲ್ ಸಾಮಾರ್ಥ್ಯದಆಕ್ಸಿಜನ್ಜನರೆಟರ್ಅನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.
ಈಗಾಗಲೇ ಹೊಸ ಐಸಿಯುಗಳ ನಿರ್ಮಾಣಕ್ಕೆಕ್ರಮ ಕೈಗೊಳ್ಳಲಾಗಿದೆ.ಕಳೆದ ವರ್ಷ ಹಾಕಲಾಗಿದ್ದಆಕ್ಸಿಜನ್ ಪ್ಲಾಂಟ್ಅನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಔಷಧಿಗಳನ್ನು ತಯಾರಿಸಿಕೊಳ್ಳಲಾಗಿದೆ. ಮೊದಲ ಡೋಸ್ ವ್ಯಾಕ್ಸಿನೇಷನ್ ಶೇ.97ರಷ್ಟಾಗಿದ್ದು, ಎರಡನೆಡೋಸ್ ವ್ಯಾಕ್ಸಿನೇಷನ್ ಶೇ.76 ರಷ್ಟಾಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಇದೊಂದುದಾಖಲೆಎAದು ಹೇಳಿದರು.
ವ್ಯಾಕ್ಸಿನೇಷನ್ ಶೇ 100ರಷ್ಟು ಆದರೆ ಮಾತ್ರಕೋವಿಡ್ ನಿಂದ ಪಾರಾಗಬಹುದು. ಇದಕ್ಕಾಗಿ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಾ ಬರುತ್ತಿದೆ. ಇದರಜೊತೆಗೆ ಸರ್ಕಾರಕಠಿಣಕ್ರಮ ಕೈಗೊಳಲಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕುಎಂದರು.
ಅಕ್ಷರದಾಸೋಹ, ಅನ್ನದಾಸೋಹದಜೊತೆಗೂಜೆ.ಎಸ್.ಎಸ್. ಸಂಸ್ಥೆ ಆರೋಗ್ಯದಾಸೋಹವನ್ನು ನೀಡುತ್ತಿದೆ. ಸರ್ಕಾರಕ್ಕೆಕೋವಿಡ್ಒಂದು ಸವಾಲಾಗಿತ್ತು. ಈ ಸವಾಲನ್ನು ಸರ್ಕಾರದಜೊತೆಗೆ ಹಲವಾರು ಸಂಘ ಸಂಸ್ಥೆಗಳು, ಆಸ್ಪತ್ರೆಗಳ ಸಹಕಾರದಿಂದ ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಗಿದೆಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮೈಸೂರಿನಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಮೈಸೂರು ಮಹಾನಗರಪಾಲಿಕೆಯ ಮೇಯರ್ ಸುನಂದ ಪಾಲನೇತ್ರ, ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್.ನಾಗೇಂದ್ರ ಸೇರಿದಂತೆ ಇತರರು ಹಾಜರಿದ್ದರು.
Covid problem
Discussion about this post