ಚಿಕ್ಕಮಗಳೂರು: ದತ್ತ ಜಯಂತಿ ಕಾರ್ಯಕ್ರಮ ಡಿಸೆಂಬರ್ ೧೭ ರಿಂದ ೧೯ ರವರೆಗೆ ನಡೆಯಲಿದ್ದು, ಕೋವಿಡ್ -೧೯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಆಚರಿಸುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.
ಇದನ್ನೂ ಓದಿ: JD(S): ಚಿಕ್ಕಮಗಳೂರು ನಗರದ ಎಲ್ಲಾ ವಾರ್ಡ್ಗಳಲ್ಲಿ ಸ್ಪರ್ಧಿಸಲು ಜೆಡಿಎಸ್ ಸಿದ್ಧ
ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ದತ್ತ ಜಯಂತಿ ಕಾರ್ಯಕ್ರಮದ ಆಚರಣೆ ಕುರಿತು ನಡೆದ ಪೂರ್ವ ಸಿದ್ಧಾತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕೋವಿಡ್-೧೯ ಇರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ ನಡೆಸುವಂತೆ ತಿಳಿಸಿದ ಅವರು ಶಾಂತಿ, ಸುವ್ಯವಸ್ಥೆ ಹಾಗೂ ಶಿಸ್ತು ಪಾಲನಾ ದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಲ್ಲದೆ, ದತ್ತ ಪೀಠಕ್ಕೆ ಆಗಮಿಸುವವರು ಎರಡು ಭಾರಿ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ಹೇಳಿದರು.
ಇದನ್ನೂ ಓದಿ: B.R. Ambedkar: ಬಿ.ಆರ್.ಅಂಬೇಡ್ಕರ್ ಚಿಂತನೆಗಳು ಸದಾ ಕಾಲ ಅಮರ
ದತ್ತಪೀಠದ ರಸ್ತೆಯು ಗುಂಡಿಗಳಿಂದ ಕೂಡಿದ್ದು, ರಸ್ತೆಯ ಗುಂಡಿಗಳನ್ನು ದುರಸ್ಥಿ ಪಡಿಸುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ಔಷಧಿ, ಅಂಬ್ಯುಲೆನ್ಸ್ನೊಂದಿಗೆ ವೈದ್ಯಾಧಿಕಾರಿಗಳನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.
ಇದನ್ನೂ ಓದಿ: ಕಟ್ಟಕಡೆಯ ವ್ಯಕ್ತಿಯ ಅಭ್ಯುದಯಕ್ಕಾಗಿ ಹೋರಾಡಿದ ಮಹಾಶಯ ಅಂಬೇಡ್ಕರ್
ಅಲ್ಲಂಪುರ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲುಗಡೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ತಾತ್ಕಾಲಿಕ ವಿದ್ಯುತ್ ಸಂಪರ್ಕ, ಭಕ್ತಾದಿಗಳ ಅಗತ್ಯಕ್ಕೆ ತಕ್ಕಂತೆ ಬಸ್ ಸೌಕರ್ಯ ಹಾಗೂ ಖಾಸಗಿ ಮಿನಿ ಬಸ್ ಸೌಕರ್ಯ ನಿಯೋಜಿಸುವಂತೆ ಕೆ.ಎಸ್.ಆರ್.ಟಿ.ಸಿ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಕಟ್ಟಕಡೆಯ ವ್ಯಕ್ತಿಯ ಅಭ್ಯುದಯಕ್ಕಾಗಿ ಹೋರಾಡಿದ ಮಹಾಶಯ ಅಂಬೇಡ್ಕರ್
ದತ್ತಪೀಠಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಬಿ.ಎಸ್.ಎನ್.ಎಲ್ ಮೊಬೈಲ್ ತರಾಂಗತರಗಳು ವ್ಯವಸ್ಥಿತವಾಗಿರಬೇಕು. ದತ್ತ ಜಯಂತಿ ಕಾರ್ಯಕ್ರಮ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದತ್ತ ಮಾಲಾಧಾರಿಗಳು ಆಗಮಿಸುವುದರಿಂದ ವಾಹನ ಸಂಚಾರ ಹಾಗೂ ವಾಹನಗಳ ನಿಲುಗಡೆಗೆ ಅಡಚಣೆ ಆಗುವುದರಿಂದ ಅಂದು ಪ್ರವಾಸಿಗರು ಬರುವುದನ್ನು ನಿರ್ಬಂಧಿಸಲಾಗುವುದು. ತಾತ್ಕಾಲಿಕ ಆಸ್ಪತ್ರೆಗೆ ಹಾಗೂ ಸಂಸ್ಥೆಯ ಆವರಣಕ್ಕೆ ಸುಣ್ಣ ಬಣ್ಣ ಬಳಿಯುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ತಿಳಿಸಿದರು.
ಇದನ್ನೂ ಓದಿ: Police service unique: ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅನನ್ಯ
ನಗರ ಅಲಂಕಾರಕ್ಕಾಗಿ ನಿಗಧಿಪಡಿಸಿದ ಸ್ಥಳಗಳ ಪಟ್ಟಿ ಪಡೆದು, ಅವುಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಹಾಕುವ ಬಂಟಿಂಗ್ಸ್ ಹಾಗೂ ಬ್ಯಾನರ್ ಹಾಗೂ ಧಾರ್ಮಿಕ ಕಟ್ಟಡಗಳ ಮುಂದೆ ಹಾಕುವ ಪ್ಲೆಕ್ಸ್ಗಳ ಮೇಲೆ ನಿಗಾವಹಿಸುವಂತೆ ಹೇಳಿದರು.
ಇದನ್ನೂ ಓದಿ: Omikron panic: ಒಮಿಕ್ರಾನ್ ಭೀತಿ: ತಜ್ಞರ ಸಲಹೆಯಂತೆ ಮುಂದುವರಿಯುವೆ ಎಂದ ಸಿಎಂ ಬೊಮ್ಮಾಯಿ
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಮುಖಂಡರು ಹಾಜರಿದ್ದರು.
ಇದನ್ನೂ ಓದಿ: Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು
Dattajayanti Programme: Instructions for peace and discipline
Discussion about this post