ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದ ನೆರವು ಕೇಳಿದ್ದೇವೆ. ಕರಾವಳಿ ಕಾವಲು ಪಡೆಗೆ 30 ಸುಸಜ್ಜಿತ ಬೋಟ್ಗಳ ಬೇಡಿಕೆಯನ್ನೂ ಇಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇದನ್ನೂ ಓದಿ: Crop damage relief: ಕೊಡಗಿನಲ್ಲಿ ಅಕಾಲಿಕ ಮಳೆ,15 ದಿನಗಳಲ್ಲಿ ಬೆಳೆ ಹಾನಿ ಪರಿಹಾರ
ದೇಶದ್ರೋಹ ಚಟುವಟಿಕೆಯಲ್ಲಿ ಭಟ್ಕಳವೂ ಸೇರಿದಂತೆ ಕರಾವಳಿ ಭಾಗದ ಹಲವು ಯುವಕರು ಪಾಲ್ಗೊಳ್ಳುತ್ತಿರುವ ಸಂಶಯವಿದ್ದು, ಈ ಬಗ್ಗೆ ನಿಗಾ ಇಡಲಾಗುತ್ತಿದೆ ಎಂದರು. ಮೋದಿ ಸರ್ಕಾರ ಬಂದ ಮೇಲೆ ಬಾಂಬ್ ಸ್ಫೋಟದಂತಹ ಚಟುವಟಿಕೆ ತಗ್ಗಿದೆ.ಎಸ್.ಡಿ.ಪಿ.ಐ., ಪಿ.ಎಫ್.ಐ. ಸಂಘಟನೆ ನಿಷೇಧಿಸುವ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು ಎಂದರು .
ಇದನ್ನೂ ಓದಿ: Farmers distrust: ಕೃಷಿ ಕಾಯ್ದೆ ಹಿಂಪಡೆದ ಮಾತ್ರಕ್ಕೆ ರೈತರ ಅಪನಂಬಿಕೆ ಕಡಿಮೆಯಾಗದು
ಮುರ್ಡೇಶ್ವರ ದೇವಸ್ಥಾನದ ವಿಗ್ರಹ ಧ್ವಂಸಗೊಳಿಸಿ ಐಸಿಸ್ ಧ್ವಜ ನೆಟ್ಟ ಚಿತ್ರ ಹರಿಬಿಟ್ಟವರ ಕುರಿತು ತನಿಖೆಗೆ ಸೂಚಿಸಲಾಗಿದೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸಲಾಗುವದು. ದೇವಸ್ಥಾನಕ್ಕೆ ಸೋಮವಾರದಿಂದಲೆ ಭದ್ರತೆ ಹೆಚ್ಚಿಸಲಾಗಿದೆ’ ಎಂದರು.
ಇದನ್ನೂ ಓದಿ: e Paper – November 24, 2021
ಕಾಂಗ್ರೆಸ್ಗೆ ಒಳ ಒಪ್ಪಂದ ಮಾಡಿಕೊಂಡು ರೂಢಿ ಇದೆ. ನಾವು ಅವರ ರೀತಿಯಲ್ಲಿ ಸಾಗುವುದಿಲ್ಲ. ನಮಗೆ ಕಾಂಗ್ರೆಸ್ ಸೋಲಿಸುವದಷ್ಟೆ ಗುರಿ. ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ಅವರ ಬೆಂಬಲ ಪಡೆದು ಹೆಚ್ಚು ಲೀಡ್ ಪಡೆಯುತ್ತೇವೆ’ ಎಂದರು.
Demand for 30 well-equipped boats

























Discussion about this post