ಚಿಕ್ಕಮಗಳೂರು : ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸುವುದರ ಜತೆಗೆ ಸಮಾಜವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಡಿವಾಳರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವಿಜಯಲಕ್ಮೀ ಅಂಜನಪ್ಪ ಸರ್ಕಾರವನ್ನು ಒತ್ತಾಯಿಸಿದರು.
ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಮಡಿವಾಳ ಸಮುದಾಯ ರಾಜ್ಯದ ಹಿಂದುಳಿದ ಸಮುದಾಯಗಳಲ್ಲಿ ಒಂದಾಗಿದೆ. ಸರ್ಕಾರವು ಸಮಾಜದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿದೆ ಆದರೆ ಇದುವರೆಗೂ ಯಾವುದೇ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸದೆ ಮೀನಾಮೇಷ ಏಣಿಸುತ್ತಿದೆ ಜತೆಗೆ ಅನುದಾನಗಳು ಹಂಚಿಕೆಯನ್ನು ತಾರತಮ್ಯ ಎದುರಿಸುತ್ತಿದ್ದು ಸರ್ಕಾರದ ಪಾಲಿಗೆ ಸಮಾಜ. ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬತಾಗಿದೆ ಅಂತಾ ಅಸಮಾಧಾನ ಹೊರಹಾಕಿದರು.
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸುವ ಸಂಬಂಧ ಡಾ. ಅನ್ನಪೂರ್ಣಮ್ಮ ಅವರು ಕುಲಶಾಸ್ತಿçÃಯ ವರದಿ ಸಿದ್ದಪಡಿಸಿದ್ದರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ನೀಡಲಾಗಿತ್ತು. ಇದೀಗ ಬಸವರಾಜ ಬೊಮ್ಮಾಯಿಸ ಸಕಾರ ಅದನ್ನು ಕೇಂದ್ರಕ್ಕೆ ಕಳುಹಿಸಿಕೊಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಸಮಾಜವು ತೀರಾ ಹಿಂದುಳಿದಿದ್ದು, ಏಳಿಗೆಗಾಗಿ ಸರ್ಕಾರ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಬೇಕು, ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಸಾಲ ಸೌಲಭ್ಯವನ್ನು ಹೆಚ್ಚಿಸಬೇಕು, ಈ ನಿಟ್ಟಿನಲ್ಲಿ ಮಹಿಳಾ ಜಾಗೃತಿ ಜತೆಗೆ ಮಹಿಳಾ ಸಬಲೀಕರಣಗೊಳಿಸಿ ಸಮಾಜವನ್ನು ಸಂಘಟನೆ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸುಮಾರು ೧೨ ಲಕ್ಷಕ್ಕೂ ಹೆಚ್ಚು ಮಂದಿ ಮಡಿವಾಳ ಸಮಾಜದವರಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಿಲಯಗಳ ಸ್ಥಾಪನೆಯಾಗಬೇಕು, ಸಮುದಾಯಭವನಗಳ ನಿರ್ಮಿಸಬೇಕು ಜತೆಗೆ ಮಡಿವಾಳ ಸಮುದಾಯ ಆದುನಿಕ ಯಂತ್ರೋಪಕರಣ ಖರೀದಿಸಲು ಅನುಕೂಲವಾಗುವಂತೆ ನೆರವು ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಡಿವಾಳ ಮಾಚಿದೇವ ಮಹಿಳಾ ಸಂಘದ ಸಂಘಟನಾ ಕಾರ್ಯದರ್ಶಿ ವನಜಾಮಂಜುನಾಥ್, ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ, ಮಂಜುನಾಥ್ ಇದ್ದರು.

























Discussion about this post