ಮೂಡಿಗೆರೆ: ಇಲ್ಲಿನ ತೋಟಗಾರಿಕೆ ಮಹಾ ವಿದ್ಯಾಲಯದಲ್ಲಿ ಟ್ರಾಕ್ಟರ್ ಚಾಲನೆ ಮಾಡುತ್ತಿದ್ದ ಹರೀಶ್ (೩೨) ಎಂಬಾತ ಶನಿವಾರ ತೋಟಗಾರಿಕಾ ಮಹಾ ವಿದ್ಯಾಲಯದ ಆವರಣದಲ್ಲಿ ಕೆಲಸ ಮಾಡುತ್ತಿರುವಾಗ ನಿಯಂತ್ರಣ ತಪ್ಪಿ ಟ್ರಾಕ್ಟರ್ ಮುಗುಚಿ ಬಿದ್ದ ಪರಿಣಾಮ ಚಾಲಕ ಹರೀಶ್ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಚಾಲಕ ಹರೀಶ್ ಎಂದಿನಂತೆ ತೋಟಗಾರಿಕೆ ಮಹಾ ವಿದ್ಯಾಲಯದೊಳಗೆ ಹಳೆಕೋಟೆ ಸಮೀಪದಲ್ಲಿ ಶನಿವಾರ ಮಧ್ಯಾಹ್ನ ಕೆಲಸ ಮಾಡುತ್ತಿದ್ದರು. ಟ್ರ್ಯಾಕ್ಟರ್ ಚಾಲನೆ ಮಾಡುತ್ತಿರುವಾಗ ಟ್ರ್ಯಾಕ್ಟರ್ ನಿಯಂತ್ರಣಕ್ಕೆ ಸಿಗದೇ ಇಳಿಜಾರಿನಲ್ಲಿ ಮಗುಚಿ ಚಾಲಕನ ಮೇಲೆ ಬಿದ್ದಿದ್ದು, ಚಾಲಕ ಹರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Driver dies

























Discussion about this post