ಚಿಕ್ಕಮಗಳೂರು: ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯದಂತೆ ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು, ನಿಯಮಗಳನ್ನು ಉಲ್ಲಂಘಿಸಿ ತ್ಯಾಜ್ಯವನ್ನು ಎಸೆದಲ್ಲಿ ದಂಡದೊಂದಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್. ನಾಗರಾಜ್ ಎಚ್ಚರಿಸಿದರು.
ಶನಿವಾರ ಜಿಲ್ಲಾಡಳಿತ ಹಾಗೂ ನಗರಸಭೆ, ಅರಣ್ಯ ಇಲಾಖೆ ಸಹಯೋಗದಲ್ಲಿ ಗಿರಿಶ್ರೇಣಿಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿ ಜಿಲ್ಲೆಯು ಪ್ರವಾಸಿತಾಣಗಳ ಬೀಡಾಗಿದ್ದು ಇಲ್ಲಿಗೆ ಆಗಮಿಸುವ ಪ್ರವಾಸಿಗರು ಕೆಲವೊಂದು ಮೌಡ್ಯಕ್ಕೆ ಒಳಗಾಗಿ ಬಳಸಿದ ಬಟ್ಟೆ, ಪ್ಲಾಸ್ಟಿಕ್ ಮತ್ತಿತ್ತರ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿದ್ದಾರೆ, ಇದರಿಂದಾಗಗಿ ಪರಿಸರ ಹಾನಿಯಾಗುವುದಲ್ಲದೇ, ವನ್ಯಜೀವಿಗಳಿಗೂ ಕುತ್ತು ತರಲಿದೆ ಎಂದರು.
ಪ್ರವಾಸಿಗರು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು ಪರಿಸರನ್ನು ಸಂರಕ್ಷಣೆ ಮಾಡುವಂತೆ ವಿನಂತಿಸಿಕೊAಡರು.
ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಗಿರಿಶ್ರೇಣಿ ಭಾಗದಲ್ಲಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಆದರೂ ಐಡಿಪೀಠ, ಮುಳ್ಳಯ್ಯನಗಿರಿ ಮತ್ತೀತರ ಕಡೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯಲಾಗಿದೆ. ಪ್ರಕೃತಿಗೆ ವಿರುದ್ದವಾಗಿ ಪ್ರವಾಸಿಗರು ನಡದುಕೊಂಡಲ್ಲಿ ಮುಂದಿನ ದಿನಗಳಲ್ಲಿ ಪ್ರವಾಸಿತಾಣಗಳಿಗೆ ನಿರ್ಬಂಧ ವಿಧಿಸುವ ಅನಿವಾರ್ಯತೆ ಎದುರಾಗಬಹುದು ಎಂದು ಎಚ್ಚರಿಸಿದರು.
ಜಿಲ್ಲಾಡಳಿತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಅರಣ್ಯ ಸಮಿತಿ ರಚಿಸಿ ಪರಿಸರ ಸಂರಕ್ಷಣೆಗೆ ಮುಂದಾಗಿದೆ. ಮುಂದಿನ ದಿನಗಳಲ್ಲಿ ಸಿಬ್ಬಂದಿಗಳ ಸಂಖ್ಯೆ ಹೆಚ್ಚಿಸಿ ಪರಿಸರದ ಬಗ್ಗೆ ತೀವ್ರ ನಿಗಾವಹಿಸಲು ಸ್ಥಳೀಯ ಆಡಳಿತಕ್ಕೆ ಸೂಚಿಸಲಾಗುವುದು ಎಂದರು.
ಸ್ಥಳೀಯ ಪಂಚಾಯಿತಿ ರೂಪಿಸಿದ ನಿಯಮಗಳನ್ನು ಉಲ್ಲಂಘಿಸಿ ಪ್ರವಾಸಿ ತಾಣಗಳನ್ನು ತ್ಯಾಜ್ಯಗಳ ಮೂಲಕ ಹಾಳು ಗಡವಿದ್ದಲ್ಲಿ ದಂಡದೊAದಿಗೆ ಸೂಕ್ತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಗರಸಭೆ ಪೌರಾಯುಕ್ತ ಬಿ.ಸಿ ಬಸವರಾಜ್ ಮಾತನಾಡಿ ಗಿರಿಶ್ರೇಣಿ ಭಾಗದಲ್ಲಿ ಈಹಿಂದೆ ಸ್ವಚ್ಚತಾ ಅಭಿಯಾನ ಕೈಗೊಳ್ಳುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಗಿತ್ತು ಆದಾಗ್ಯೂ ಇಲ್ಲಿಗೆ ಆಗಮಿಸುವ ಪ್ರವಾಸಿಗರು ಅಸಡ್ಡೆ ತೋರುವ ಮೂಲಕ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯöವನ್ನು ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ ಆ ನಿಟ್ಟಿನಲ್ಲಿ ಇಲ್ಲಿನ ಸ್ಥಳೀಯ ಪಂಚಾಯಿತಿ ತೀವ್ರತರವಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.
ಇಲ್ಲಿಗೆ ಆಗಮಿಸುವ ಪ್ರವಾಸಿಗರು ಪ್ರಕೃತಿ ಸೌಂದರ್ಯವನ್ನು ಕಾಪಾಡಬೇಕು. ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು, ಸಾರ್ವಜನಿಕರು, ಪ್ರವಾಸಿಗರು ಪ್ರಕೃತಿಯೊಡನೆ ಆಟವಾಡದೆ ಅದನ್ನು ಉಳಿಸಿ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಯೋಚಿಸಬೇಕಿದೆ. ಕೆಲಸವಾಗಬೇಕಿದೆ, ಶುಚಿತ್ವಕ್ಕೆ ಹೆಚ್ಚು ಆದ್ಯತೇ ನೀಡಬೇಕು. ನಿಯಮಗಳನ್ನು ಉಲ್ಲಂಘಿಸಿ ಪರಿಸರ ಹಾನಿ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳವ ಬಗ್ಗೆ ಡಿಸಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ. ಕಾಂತರಾಜ್, ಹಾಗೂ ನಗರಸಭೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಇದ್ದರು.

























Discussion about this post