ವಿಜಯಪುರ : ಗ್ರಾಮೀಣ ಪ್ರದೇಶದಲ್ಲಿ ಹೆಣ್ಣು ಮಕ್ಕಳು ಹೈಸ್ಕೂಲ್ ಹೋಗಲು ಹಾಗೂ ಹೈಸ್ಕೂಲ್ ನಿಂದ ಪಿಯುಸಿ ಮಾಡುವ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ರೈತರ ವಿದ್ಯಾನಿಧಿಯನ್ನು 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೂ ವಿಸ್ತರಣೆ ಮಾಡುವ ಬಗ್ಗೆ ತೀರ್ಮಾನ ಮಾಡಿದ್ದು, ಈ ಬಗ್ಗೆ ಕೂಡಲೇ ಆದೇಶ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಲೋಕೋಪಯೋಗಿ, ಕಂದಾಯ, ವಸತಿ, ಪ್ರವಾಸೋದ್ಯಮ, ಆರೋಗ್ಯ, ನಗರಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ 11 ಇಲಾಖೆಗಳ ಸುಮಾರು 244 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಹೆಣ್ಣು ಮಕ್ಕಳು ಹೈಸ್ಕೂಲ್ ಬರುವುದಕ್ಕೆ ಹಾಗೂ ಹೈಸ್ಕೂಲ್ ನಿಂದ ಪಿಯುಸಿ ಮಾಡುವ ಸಂಖ್ಯೆ ಕಡಿಮೆಯಾಗುತ್ತಿದೆಂಬ ಮಾಹಿತಿಯಿಂದ ಇದಕ್ಕೆ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ರೈತರ ವಿದ್ಯಾನಿಧಿಯನ್ನು 8ನೇ ಮತ್ತು 9ನೇ ತರಗತಿ ಮಕ್ಕಳಿಗೂ ವಿಸ್ತರಣೆ ಮಾಡುಬೇಕೆನ್ನುವ ಬಗ್ಗೆ ತೀರ್ಮಾನ ಮಾಡಿದ್ದೇನೆ ಈ ಬಗ್ಗೆ ಕೂಡಲೇ ಆದೇಶ ಮಾಡುವುದಾಗಿ ಘೋಷಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 4 ತಿಂಗಳಾಗಿದೆ, ಅಧಿಕಾರ ಪಡೆದ 2 ಗಂಟೆಯಲ್ಲಿಯೇ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿಯನ್ನು ಜಾರಿಗೆ ತರಲು ತೀರ್ಮಾನಿಸಲಾಯಿತು, ಇತಿಹಾಸದಲ್ಲಿಯೇ ಈ ಯೋಜನೆ ಬೇರೆಯಾವ ರಾಜ್ಯಯಲ್ಲಿಯೂ ಇರಲಿಲ್ಲ, ಅಂತಹ ಒಂದು ನಿರ್ಣಯವನ್ನು ಕೈಗೊಂಡಿದ್ದೇನೆ.
2.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಗಿದ್ದು, ಪದವಿ ಶಿಕ್ಷಣಕ್ಕೆ ಈಗ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಅದು ಪೂರ್ಣಗೊಳ್ಳುತ್ತಿದ್ದಂತೆ ಅರ್ಹರಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುವುದು ಇದರಿಂದ 5 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಬೊಮ್ಮಾಯಿ ತಿಳಿಸಿದರು.
Extension of ‘Vidyanidhi’ scheme

























Discussion about this post