ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ೩ ವರ್ಷದ ಅವಧಿಯ ಸದಸ್ಯತ್ವಕ್ಕಾಗಿ ರಾಜ್ಯಾದ್ಯಂತ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಜಿಲ್ಲೆಗೆ ಸದಸ್ಯತ್ವ ಅಭಿಯಾನ ಉಸ್ತುವರಿಗಳಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ ಅವರು ಚಿಕ್ಕಮಗಳೂರಿನಲ್ಲಿ ಚಾಲನೆ ನೀಡಿದರು.
ನಗರದ ೧೦ನೇ ವಾರ್ಡ್‌ನ ಬೂತ್ ಸಂಖ್ಯೆ ೧೧೦ ರ ಉಂಡೇದಾಸರಹಳ್ಳಿಯ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಅವರ ಮನೆಯಂಗಳದಲ್ಲಿ ನಡೆದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಸ್ಥಳೀಯರು ಭಾಗವಹಿಸಿ, ಸದಸ್ಯತ್ವ ಪಡೆದರು. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಸಂವಿಧಾನವನ್ನು ಎತ್ತಿಹಿಡಿಯಲು, ಎಲ್ಲಾ ವರ್ಗದ ಜನರನ್ನೂ ಒಗ್ಗೂಡಿಸಿ ಸದೃಡ ಭಾರತ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಪಕ್ಷ ಇದನ್ನು ಉಳಿಸಿಕೊಂಡು ಹೋಗಲು ಮತ್ತೆ ಕಾಂಗ್ರೆಸ್‌ಗೆ ಜನ ಅಧಿಕಾರ ನೀಡಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷವನ್ನು ಸಂಘಟನಾತ್ಮಕವಾಗಿ ಕಟ್ಟಲು ದೇಶಾದ್ಯಂತ ಸದಸ್ಯತ್ವ ಅಭಿಯಾನ ಆರಂಭಿಸಿದ್ದೇವೆ. ಈ ಜಿಲ್ಲೆಯಲ್ಲೂ ಕೆಲವೇ ದಿನಗಳಲ್ಲಿ ಲಕ್ಷಾಂತರ ಸದಸ್ಯರ ನೋಂದಾಣಿ ಗುರಿಯನ್ನು ಇಟ್ಟುಕೊಂಡಿರುವುದು ಸಂತಸದ ವಿಷಯ ಎಂದು ಬಾವ ಅಭಿಪ್ರಾಯಿಸಿದರು.
ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾದ ಡಾ.ಡಿ.ಎಲ್.ವಿಜಯಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ನಯಾಜ್, ಸ್ಥಳೀಯ ಮುಖಂಡರಾದ ವರದರಾಜ್, ಕುಮಾರ್, ಹೊನ್ನೇಶ್, ಚಂದ್ರು, ಶ್ರೀಕಾಂತ್, ಸೋಮಶೇಖರ್, ಸದಾಶಿವ ಇದ್ದರು.
For Membership of Congress

























Discussion about this post