ಚಿಕ್ಕಮಗಳೂರು: ತಾಲೂಕು ಐ.ಡಿ.ಪೀಠ ಗ್ರಾಮದ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಡಿ.೧೭ ರಿಂದ ೧೯ ರವರೆಗೆ ದತ್ತಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಹಿನ್ನೆಲೆ ಡಿ.೧೬ ರ ಬೆಳಿಗ್ಗೆ ೬ ರಿಂದ ಡಿ.೨೦ ರವರೆಗೆ ಬೆಳಿಗ್ಗೆ ೬ ಗಂಟೆಯವರೆಗೆ ಗಿರಿ ಭಾಗದ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಭಂಧ ಹೇರಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳ ಮತ್ತು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆ, ಐ.ಡಿ.ಪೀಠ ಈ ಭಾಗಗಳಲ್ಲಿ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿರ್ಭಂದಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಆದರೆ ಸದರಿ ದಿನಗಳಂದು ಪ್ರವಾಸಿಗರು ಇತರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ನಿರ್ಭಂದ ಇರುವುದಿಲ್ಲ ಹಾಗೂ ಹೋಟೆಲ್ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಈಗಾಗಲೇ ವಾಸ್ತವ್ಯಕ್ಕೆ ಕಾಯ್ದಿರಿಸಿಕೊಂಡಿದ್ದಲ್ಲಿ ವಾಸ್ತವ್ಯ ಮಾಡಲು ಸಹ ಯಾವುದೇ ನಿರ್ಬಂಧ ಇರುವುದಿಲ್ಲ.
For tourists to giri part of the district, nirbhandha

























Discussion about this post