ಬೆಂಗಳೂರು: ಇತ್ತೀಚೆಗೆ ನಿಧನರಾಗಿರುವ ನಟ ಪುನೀತ್ ರಾಜ್‌ಕುಮಾರ್ ಅವರ ‘ಗಂಧದಗುಡಿ’ ವಿಶೇಷ ಡಾಕ್ಯುಫಿಲ್ಮ್ ಟೀಸರ್ ಸೋಮವಾರ ಅನಾವರಣಗೊಂಡಿದೆ.
ಪಿಆರ್‌ಕೆ ಯೂಟ್ಯೂಬ್ ಚಾನೆಲ್‌ನಲ್ಲಿ ‘ಗಂಧದಗುಡಿ’ ಟೀಸರ್ ಬಿಡುಗಡೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
‘ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ’ ಎಂದು ಬೊಮ್ಮಾಯಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಪುನೀತ್ ಹಾಡಿರುವ ‘ಅರೇಸ ಡಂಕಣಕ ಹಾಡು ಬಿಡುಗಡೆ
ನವೆಂಬರ್ 1 ರಂದು ‘ಗಂಧದಗುಡಿ’ ಟೀಸರ್ ಬಿಡುಗಡೆ ಮಾಡಲು ಪುನೀತ್ ರಾಜ್‌ಕುಮಾರ್ ಸಿದ್ದತೆ ಮಾಡಿದ್ದರು. ಆದರೆ, ದುರದೃಷ್ಟವಶಾತ್ ಅಕ್ಟೋಬರ್ 29 ರಂದು ಅವರು ನಿಧನರಾದರು.
ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ.
(1/2) #PuneethRajukumar #mudskipper— Basavaraj S Bommai (@BSBommai) December 6, 2021
























Discussion about this post