ಇಂದು ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಸ್ಥಿರವಾಗಿದೆ. ಚಿನ್ನ ಖರೀದಿಸಬೇಕು ಅಂದುಕೊಂಡಿದ್ದರೆ ದರ ವಿವರ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರು: ಚಿನ್ನ ಇಳಿಕೆಯತ್ತ ಸಾಗಿರುವಾಗ ಆಭರಣ ಖರೀದಿಸೋಣ ಅಂದುಕೊಂಡಿರುತ್ತೇವೆ. ಅದರಲ್ಲಿಯೂ ಮುಖ್ಯವಾಗಿ ಇನ್ನೇನು ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಹಬ್ಬದ ವಿಶೇಷಕ್ಕೆ ಚಿನ್ನಾಭರಣವನ್ನು ಖರೀದಿಸಬೇಕು ಎಂಬ ಆಸೆಯೂ ಇರುತ್ತದೆ ಕೆಲವೆಡೆ ಸಂಪ್ರದಾಯವೂ ಇದೆ. ಹೀಗಿರುವಾಗ ಚಿನ್ನ , ಬೆಳ್ಳಿ ದರ ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಹಜ. ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,87,700 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ದರದಲ್ಲಿಯೂ ಸಹ ಇಂದು ಯಾವುದೇ ಏರಿಕೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ಬೆಲೆ
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,060 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,600 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,160 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,91,600 ರೂಪಾಯಿ ನಿಗದಿಯಾಗಿದೆ. ಚಿನ್ನದ ದರದಲ್ಲಿ ಯಾವುದೇ ಏರಿಳಿತ ಕಂಡು ಬದಿಲ್ಲ. ಬೆಳ್ಳಿ ಬೆಲೆಯೂ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 68,900 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 4,87,700 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆಯಲ್ಲಿಯೂ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆ 68,900 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,67,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಬೆಳ್ಳಿ ಬೆಲೆಯಲ್ಲಿಯೂ ಸಹ ಯಾವುದೇ ಏರಿಳಿತಗಳಿಲ್ಲ, ಕೆಜಿ ಬೆಳ್ಳಿ ಬೆಲೆ 64,600 ರೂಪಾಯಿ ದಾಖಲಾಗಿದೆ.

























Discussion about this post