ದೆಹಲಿ: ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದರ ಕುರಿತಾಗಿ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ.
ಬೆಂಗಳೂರು:
ಕಳೆದ ಕೆಲವು ದಿನಗಳಿಂದ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಕಂಡು ಬರುತ್ತಿದೆ.
ಇಂದು ಅಕ್ಟೋಬರ್ 22, ಶುಕ್ರವಾರ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಏರಿಕೆಯಾಗಿದೆ. ಆಭರಣ ಖರೀದಿಸಲು ಬೆಲೆ ಇಳಿಕೆಯಾಗಿರಲಿ ಎಂಬ ಆಸೆ ತಪ್ಪೇನಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಚಿನ್ನ,ಬೆಳ್ಳಿ ಬೆಲೆ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಹಾಗಿರುವಾಗ ನೀವು ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ. ಪ್ರಮುಖ ನಗರಗಳಲ್ಲಿ ಆಭರಣಗಳ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ರಾಜ್ಯದ ರಾಜಧಾನಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ದರದಲ್ಲಿಯೂ ಸಹ ಏರಿಕೆ ಕಂಡು ಬಂದಿತ್ತು, ಕೆಜಿ ಬೆಳ್ಳಿಗೆ 65,500 ರೂಪಾಯಿ ನಿಗದಿಯಾಗಿದೆ. ಸುಮಾರು 900 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,840 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,920 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,200 ರೂಪಾಯಿ ನಿಗದಿಯಾಗಿದೆ. ಸುಮಾರು 1,100 ರೂಪಾಯಿ ಏರಿಕೆಯಾಗಿದೆ. ಇನ್ನು, ಕೆಜಿ ಬೆಳ್ಳಿ ಬೆಲೆ 70,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿ ಏರಿಕೆ ಕಂಡು ಬಂದಿದೆ.
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ನಿಗದಿಯಾಗಿದೆ. ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಏರಿಕೆ ಕಂಡು ಬಂದಿದೆ. ಇನ್ನು, ಕೆಜಿ ಬೆಳ್ಳಿ ಬೆಲೆ 70,200 ರೂಪಾಯಿ ನಿಗದಿಯಾಗಿದೆ. ಸುಮಾರು 1,500 ರೂಪಾಯಿ ಏರಿಕೆ ಕಂಡು ಬಂದಿದೆ.
Discussion about this post