ಬೆಂಗಳೂರು: ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ ಆಗಲಿದ್ದು, ಡಿ. 20 ರಿಂದ ಭಾನುವಾರ ಹೊರತುಪಡಿಸಿ, ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 5ಗಂಟೆಯಿಂದ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಿಸಲಿದೆ.
ಈ ಬಗ್ಗೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸೋಮವಾರದಿಂದ ಶನಿವಾರದ ವರೆಗೆ ಟರ್ಮಿನಲ್ ಗಳಾದಂತ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯಪ್ಪನಹಳ್ಳಿಯಿಂದ ಬೆಳಿಗ್ಗೆ 5 ಗಂಟೆಯಿಂದ ಆರಂಭಗೊಳ್ಳಲಿದೆ. ಭಾನುವಾರ ಮಾತ್ರ ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.
ಇನ್ನೂ ವಾರದ ಎಲ್ಲಾ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 11 ಗಂಟೆಗೆ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ನಿಂದ 11.30ಕ್ಕೆ ಹೊರಡಲಿದೆ ಎಂದು ತಿಳಿಸಿದೆ.
Good news for our metro commuters: Traffic will start from 5 am.

























Discussion about this post