• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Karnataka Politics: ಮೇಲ್ಮನೆ ಚುನಾವಣೆ ಬೆಂಬಲ ಪ್ರಶ್ನೆ; ನಾಳೆ ಜೆಡಿಎಸ್ ಅಂತಿಮ ನಿರ್ಧಾರ; ಹೆಚ್.ಡಿ.ಕುಮಾರಸ್ವಾಮಿ

ಕಾಂಗ್ರೆಸ್ ಪಕ್ಷದ ನಾಯಕರು ಕೂಡ ನಮ್ಮ ಪಕ್ಷದ ಬೆಂಬಲ ಕೇಳಿಲ್ಲ. ಹಾಗಂತ ಬಿಜೆಪಿ ಪಕ್ಷವೂ ಬೆಂಬಲ ಕೋರಿಲ್ಲ.

Shri News Desk by Shri News Desk
Dec 6, 2021, 10:03 pm IST
in ರಾಜಕೀಯ
HD Kumaraswamy

ಹೆಚ್ ಡಿ ಕುಮಾರಸ್ವಾಮಿ

Share on FacebookShare on TwitterTelegram

ಮಂಡ್ಯ: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬೇರೊಂದು ಪಕ್ಷಕ್ಕೆ ಬೆಂಬಲ ಅಥವಾ ಸಹಕಾರ ನೀಡುವ ಬಗ್ಗೆ ನಾಳೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾಳೆ ಬೆಳಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದೇನೆ. ಅಲ್ಲಿ ಎಲ್ಲ ವಿಷಯಗಳನ್ನು ಸ್ಪಷ್ಟವಾಗಿ ತಿಳಿಸುತ್ತೇನೆ ಎಂದರು.

ಈ ಕ್ಷಣದವರೆಗೂ ನಾನು ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಕುಮಾರಸ್ವಾಮಿ ಅವರೇ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ. ಈವರೆಗೂ ಬಿಜೆಪಿ ಅಧಿಕೃತವಾಗಿ ನಮ್ಮ ಬೆಂಬಲ ಕೇಳಿಲ್ಲ. ಯಡಿಯೂರಪ್ಪ ಅವರು ಮಾತ್ರ ಒಂದೆರಡು ಸಲ ಈ ಬಗ್ಗೆ ಮಾತನಾಡಿದ್ದಾರೆ. ಪ್ರತಿ ಚುನಾವಣೆ ಬಂದಾಗಲೂ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ವಿರುದ್ಧ ಹುನ್ನಾರ, ಅಪಪ್ರಚಾರ ನಡೆಸುವುದು ಸಾಮಾನ್ಯವಾಗಿಬಿಟ್ಟಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ್ದು ಹಾಸನದಲ್ಲಿ ಐಐಟಿ ಸ್ಥಾಪನೆಗಾಗಿ ಮಾತ್ರ ಎಂದು ಸ್ವತಃ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೇ ಹೇಳಿದ್ದಾರೆ. ಈ ಐಐಟಿ ಹದಿನೈದು ವರ್ಷಗಳ ಬೇಡಿಕೆ. ಆದರೆ, ಕಾಂಗ್ರೆಸ್ ನಾಯಕರು ಈ ಭೇಟಿಯ ಬಗ್ಗೆ ಸಣ್ಣತನದ ಪ್ರತಿಕ್ರಿಯೆಗಳನ್ನು ನೀಡಿದರಲ್ಲದೆ, ಚುನಾವಣೆ ಮೈತ್ರಿ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದರು ಎಂದು ಅಪಪ್ರಚಾರ ನಡೆಸಿದರು. ಆದರೆ ಮೈತ್ರಿ ಬಗ್ಗೆ ನರೇಂದ್ರ ಮೋದಿ ಅವರ ಜತೆಗೂ ಚರ್ಚೆಯಾಗಿಲ್ಲ. ಬದಲಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಮಾತ್ರ ಗೌಡರು ಚರ್ಚೆ ನಡೆಸಿದ್ದಾರೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಪಕ್ಷದ ನಾಯಕರು ಕೂಡ ನಮ್ಮ ಪಕ್ಷದ ಬೆಂಬಲ ಕೇಳಿಲ್ಲ. ಹಾಗಂತ ಬಿಜೆಪಿ ಪಕ್ಷವೂ ಬೆಂಬಲ ಕೋರಿಲ್ಲ. ಯಡಿಯೂರಪ್ಪನವರು ಎರಡ್ಮೂರು ಕಡೆ ಮಾತನಾಡಿ, ಎಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಹಾಕಿಲ್ಲವೋ ಅಲ್ಲಿ ಬಿಜೆಪಿಗೆ ಬೆಂಬಲ ನೀಡಲಿ ಎಂದು ಮನವಿ ಮಾಡಿದ್ದಾರೆ. ಹಾಗೆಯೇ, ನಿನ್ನೆ ಮಂಡ್ಯದಲ್ಲೇ ಯಡಿಯೂರಪ್ಪ ಅವರು ಹೇಳಿಕೆ ನೀಡಿ; ಚುನಾವಣೆ ಮೈತ್ರಿ ಇಲ್ಲ, ಬದಲಿಗೆ ಸಹಕಾರ ಕೇಳಿದ್ದೇವೆ ಎಂದಷ್ಟೇ ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಇಟ್ಟುಕೊಂಡು ಪಕ್ಷದ ನಿರ್ಧಾರವನ್ನು ತಿಳಿಸಲಾಗುವುದು. ಜೆಡಿಎಸ್ ಆರು ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿದೆ. ಇಷ್ಟೂ ಕಡೆ ಮೂರು ಪಕ್ಷಗಳ ಅಭ್ಯರ್ಥಿಗಳು ಗೆಲ್ಲಲು ಭಾರೀ ಹಣಾಹಣಿ ನಡೆಸುತ್ತಿವೆ. ಬಿಜೆಪಿ ಕೂಡ ಸರಿಸಮನಾಗಿ ಹೋರಾಟ ನಡೆಸುತ್ತಿದೆ. ಆ ಪಕ್ಷದಿಂದ ನಮಗೇನು ಸಹಕಾರ ಇಲ್ಲ. ಅವರ ಮತಗಳನ್ನು ನಮ್ಮ ಅಭ್ಯರ್ಥಿಗಳಿಗೆ ಕೊಡುವಂತೆ ಅವರೇನು ಸೂಚನೆ ನೀಡಿಲ್ಲ. ನಾವು ಸ್ಪರ್ಧಿಸಿರುವ ಆರು ಸ್ಥಾನಗಳಲ್ಲೂ ನಮ್ಮನ್ನು ಮುಳುಗಿಸ್ತೀವಿ ಅಂತಾರೆ. ಈಗ ಮಂಡ್ಯ ಜಿಲ್ಲೆಯನ್ನೇ ಆವರಿಸಿಕೊಂಡಿದ್ದೇವೆ ಎಂದು ಹೇಳುತ್ತಿದ್ದಾರೆ. ಬಿಜೆಪಿಯವರು ನಮ್ಮ ಶತ್ರು ಪಕ್ಷವೇ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ನಮಗೆ ಸರಿ ಸಮನಾದ ಶತ್ರುಗಳೇ ಎಂದು ಅವರು ವಿವರಿಸಿದರು.

ಕೇವಲ ಜೆಡಿಎಸ್‌ ಪಕ್ಷದ ಮತಗಳನ್ನು ಕಸಿಯಲು ಕಾಂಗ್ರೆಸ್‌ ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದೆ. ನಮ್ಮ ಪಕ್ಷವನ್ನು ಮುಗಿಸುವುದೇ ಅವರ ಅಜೆಂಡಾ ಆಗಿದೆ. ಆದರೆ, ಜನರ ಆಶೀರ್ವಾದ ಇರುವ ಜೆಡಿಎಸ್‌ಪಕ್ಷವನ್ನು ನಿರ್ನಾಮ ಮಾಡುವುದು ಅಸಾಧ್ಯ.2023ರ ವಿಧಾನಸಭೆ ಚುನಾವಣೆಯಲ್ಲಿ ನಾವು 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಈ ಚುನಾವಣೆಯಲ್ಲಿ 19 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳಿಲ್ಲ. ಹಾಗಂತ ಈ ಚುನಾವಣೆಯಲ್ಲೂ ನಾವು ಯಾರ ಜತೆಗೂ ಮೈತ್ರಿ ಮಾಡಿಕೊಂಡಿಲ್ಲ. ನಮ್ಮ ಹೇಳಿಕೆಗಳನ್ನು ತಮಗೆ ಬೇಕಾದ ಹಾಗೆ ಗ್ರಹಿಸಿಕೊಂಡರೆ ನಾವೇನು ಮಾಡಲು ಸಾಧ್ಯ? ಯಡಿಯೂರಪ್ಪ ಅವರು ಬೆಂಬಲ ಕೇಳಿದ್ದಾರೆ ನಿಜ. ಅವರು ಈಗ ಮಾಜಿ ಮುಖ್ಯಮಂತ್ರಿಗಳು. ಪಕ್ಷದ ಪದಾಧಿಕಾರಿಗಳಲ್ಲ. ಅವರು ವೈಯಕ್ತಿಕವಾಗಿ ಸಹಕಾರ ಕೇಳಿದ್ದಾರೆ. ಮುಖ್ಯಮಂತ್ರಿಗಳು ಕೂಡ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರ ವೈಯಕ್ತಿಕ ಮಟ್ಟದಲ್ಲಿ ಚರ್ಚೆ ಆಗಿದೆ, ಪಕ್ಷದ ವೇದಿಕೆಯಲ್ಲಿ ಚರ್ಚೆ ಆಗಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಯಾವುದೇ ಊಹಾಪೂಹದಲ್ಲಿ ಸುದ್ದಿಗಳು ಬಿತ್ತರ ಆಗುವುದು ಬೇಡ. ನಾಳೆಯ ದಿನ ಎಲ್ಲ ವಿಷಯವನ್ನು ನಾನು ತಿಳಿಸುತ್ತೇನೆ ಎಂದು ಜೆಡಿಎಸ್ ವರಿಷ್ಠರೂ ಆಗಿರುವ ಅವರು ತಿಳಿಸಿದರು.

ನನ್ನದು ಕಟುಕ ಹೃದಯದ ಸಂಸ್ಕೃತಿ ಅಲ್ಲ
ನನ್ನನ್ನು ಕಣ್ಣೀರಸ್ವಾಮಿ ಎಂದು ಕರೆದಿರುವ ಸಿದ್ದರಾಮಯ್ಯ ಬಗ್ಗೆ ಹೇಳುವುದಾದರೆ, ಇನ್ನು ಮುಂದೆ ನಾನು ಕಣ್ಣೀರು ಹಾಕೋದಿಲ್ಲ. ಜನ ಸಾಮಾನ್ಯರ ಕಷ್ಟಗಳನ್ನು ನೋಡಿದಾಗ ಹಾಗೆ ಆಗುತ್ತದೆ. ನಾನು ಮೊದಲಿನಿಂದಲೂ ಭಾವನಾತ್ಮಕ ಸಂಸ್ಕೃತಿಯಲ್ಲಿ ಬೆಳೆದು ಬಂದಿದ್ದೇನೆ. ನಾವು ಕಟುಕ ಹೃದಯದ ಸಂಸ್ಕೃತಿಯಲ್ಲಿ ಬಂದವರಲ್ಲ. ರಾಜಕಾರಣದಲ್ಲಿ ಮತ ಪಡೆಯಲು ಕಣ್ಣೀರು ಹಾಕಿದವನಲ್ಲ ನಾನು. ಮಂಡ್ಯದ ಕನಕನಮರಡಿ ಬಳಿ ನಾಲೆಗೆ ಬಸ್‌ಬಿದ್ದು ಪ್ರಯಾಣಿಕರು ಅಸುನೀಗಿದಾಗ, ಅದರಲ್ಲಿ ಪುಟ್ಟ ಮಕ್ಕಳು ಶವವಾಗಿ ಕಂಡಾಗ ನಾನು ದುಃಖ ವ್ಯಕ್ತಪಡಿಸಿದ್ದೇನೆ. ಆಗ ನಾನು ಮುಖ್ಯಮಂತ್ರಿ ಆಗಿದ್ದೆ. ಬಿಜೆಪಿಯ ಪಕ್ಷಕ್ಕೆ ಸೇರಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ನಿನ್ನೆ ಮಂಡ್ಯದಲ್ಲಿ ಹೇಳಿರುವಂತೆ, ಕಾಂಗ್ರೆಸ್‌ನಾಯಕರು 6 ರೂಪಾಯಿ, 5 ರೂಪಾಯಿ, 2 ರೂಪಾಯಿಗೆಲ್ಲ ಪಕ್ಷದ ಅಭ್ಯರ್ಥಿ ಮನೆ ಮುಂದೆ ಕೈಕಟ್ಟಿ ನಿಲ್ಲುತ್ತಿದ್ದಾರೆ ಎಂದು ಹೇಳಿದ್ದಾರೆ. ಸಚಿವರ ಹೇಳಿಕೆಯನ್ನು ಗಮನಿಸಿದರೆ ಈ ಜಿಲ್ಲೆಯ ಕಾಂಗ್ರೆಸ್‌ನಾಯಕರ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂದು ಅಯ್ಯೋ ಎಂದು ಎನಿಸುತ್ತಿದೆ. ಜೆಡಿಎಸ್‌ ಪಕ್ಷವನ್ನು ಮುಗಿಸೇಬಿಟ್ಟಿದ್ದೇವೆ ಎನ್ನುತ್ತಿರುವ ಮಹಾನ್‌ನಾಯಕರ ಹೀನಾಯ ಸ್ಥಿತಿಯ ಬಗ್ಗೆ ಮರುಕ ಉಂಟಾಗುತ್ತಿದೆ. ಇಂಥ ಪರಿಸ್ಥಿತಿ ಯಾರಿಗೂ ಬರಬಾರದು ಅನಿಸುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಪರಿಷತ್‌ಚುನಾವಣೆಯ ಮಂಡ್ಯ ಜಿಲ್ಲೆಯ ಪಕ್ಷದ ಅಭ್ಯರ್ಥಿ ಅಪ್ಪಾಜಿ ಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನೂ ಓದಿ: ಕಮಿಷನ್ ದಂದೆ: ಸ್ವತಂತ್ರ ಆಯೋಗ ರಚಿಸಿ ತನಿಖೆ ನಡೆಸಲು ಸಿದ್ದರಾಮಯ್ಯ ಆಗ್ರಹ

(HD Kumaraswamy says Vidhana Parishad alliance decision will take tomorrow)

Tags: bjpCongressHD KumaraswamyJDSKarnataka PoliticsTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In